ಶಿವಮೊಗ್ಗ, ಜೂನ್ 21:
ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜೂನ್ 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರದ ಶಾಯ್ ಎಕ್ಸ್‍ಪೋರ್ಟ್ ಹಾಗೂ ದಾವಣಗೆರೆ ಜಿಲ್ಲೆಯ ಜಗಳೂರಿನ ಎಪಿಎಂಸಿ ಹಿಂಭಾಗದ ಶ್ರೀಕೃಷ್ಣ ಬಡಾವಣೆ ಪಟ್ಟಣ ಪಂಚಾಯತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.