Views: 288
ಬೆಂಗಳೂರು, ಅಕ್ಟೋಬರ್ 01
ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದಲ್ಲಿ ಆಂಗ್ಲ ಸಹಾಯಕ ಪ್ರಾಧ್ಯಾಪಕರು, ಹಿಂದಿ ಸಹಾಯಕ ಪ್ರಾಧ್ಯಾಪಕರು, ಸಂಸ್ಕೃತ ಸಹಾಯಕ ಪ್ರಾಧ್ಯಾಪಕರು, ತೆಲುಗು ಸಹಾಯಕ ಪ್ರಾಧ್ಯಾಪಕರು ಹಾಗೂ ತಮಿಳು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು 179 ದಿವಸಗಳ ಅವಧಿಗೆ ಮೀರದಂತೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಯಾ ಭಾಷೆಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯಾ ಭಾಷೆಯಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಟ ಶೇ. 50 ಅಂಕಗಳನ್ನು ಗಳಿಸಿರಬೇಕು. ಎನ್‍ಇಟಿ ಅಥವಾ ಕೆಸೆಟ್ ಅರ್ಹತಾ ಪರೀಕ್ಷೆ ಅಥವಾ ಪಿಹೆಚ್‍ಡಿ ಅಥವಾ ಯುಜಿಸಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ ವೇತನ ರೂ. 35000/- ಮಾತ್ರ ನೀಡಲಾಗುವುದು.
ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲೆಗಳು ಹಾಗೂ ಮೂಲದಾಖಲೆಗಳ ಎರಡು ಜೆರಾಕ್ಸ್ ಪ್ರತಿಗಳು ಮತ್ತು ಎರಡು ಭಾವಚಿತ್ರಗಳನ್ನು ಅರ್ಜಿ ನಮೂನೆಯೊಂದಿಗೆ ಅಕ್ಟೋಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಸಂದರ್ಶನಕ್ಕೆ ಹಾಜರಾಗುವುದು. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು.
ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗುವುದು. ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ನೇಮಕಾತಿಯು ತಾತ್ಕಾಲಿಕವಾಗಿರುವುದರಿಂದ ಯಾವುದೇ ಸಮಯದಲ್ಲಿ ಯಾವುದೇ ಕಾರಣ ತಿಳಿಸದೇ ಕರ್ತವ್ಯದಿಂದ ತೆಗೆದು ಹಾಕುವ ಅಧಿಕಾರ ನೃಪತುಂಗ ವಿಶ್ವವಿದ್ಯಾಲಯಕ್ಕೆ ಇರುವುದು ಹಾಗೂ ನೇರ ನೇಮಕಾತಿಗಾಗಿ ಯಾವುದೇ ತರಹದ ಹಕ್ಕಿಗೆ ಒಳಪಟ್ಟಿರುವುದಿಲ್ಲ ಎಂದು ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.