ಬೆಂಗಳೂರು, ಡಿಸೆಂಬರ್ 4;
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ ಇಬ್ಬರು ಮಕ್ಕಳಿಗೆ ನೀಡಲಾಗುತ್ತಿರುವ ಶೈಕ್ಷಣಿಕ ಸಹಾಯಧನ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.
2023-24ನೇ ಸಾಲಿನ ಅರ್ಜಿಗಳನ್ನು 2024 ನೇ ಮಾರ್ಚ್ 15 ರಿಂದ ಮತ್ತು 2024-25ನೇ ಸಾಲಿನ ಶೈಕ್ಷಣಿಕ ಸಹಾಯಧನದ ಅರ್ಜಿಗಳನ್ನು 2024ನೇ ಸೆಪ್ಟೆಂಬರ್ 25 ರಿಂದ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಪ್ರಾರಂಭಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 30 ರವರೆಗೆ ಅರ್ಜಿ ಸಲ್ಲಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ವಿವಿಧ ಕಾರ್ಮಿಕ ಸಂಘಟನೆಗಳು ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲು ಕೋರಿರುವ ಹಿನ್ನಲೆಯಲ್ಲಿ, ಅವಧಿಯನ್ನು ವಿಸ್ತರಿಸಲಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಜಂಟಿ ಕಾರ್ಯದರ್ಶಿ ಡಾ.ಸಂಗಪ್ಪ ಉಪಾಸೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.