ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 24:-
2025 ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’. ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ.
ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಿಗೆ ಅನ್ವಯಿಸುವ ನಿಯಮಾವಳಿಗಳು https://padmaawards.gov.in ರಲ್ಲಿ ಲಭ್ಯವಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡೆಗೆ ಸಂಬಂಧಿಸಿದಂತೆ. ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮತ್ತು ಸಾಪ್ಟ್ ಪ್ರತಿಗಳನ್ನು ನೇರವಾಗಿ ಇ-ಮೇಲ್ ವಿಳಾಸ- uspolitical-dpar@karnataka.gov.in ಗೆ ಕಳುಹಿಸುವುದು. ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 31ರ ನಂತರ ಸಲ್ಲಿಸುವ ಯಾವುದೇ ಪ್ರಸ್ತಾವನೆ/ಮನವಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ, ಸಾಧಕರು ಅರ್ಜಿಗಳನ್ನು ಸಲ್ಲಿಸುವಂತೆ ಹಾಗೂ ಹೆಚ್ಚಿನ ವಿವರಗಳಿಗೆ :- 080-29787443 / 9632778567 ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.