Views: 5
ಬೆಂಗಳೂರು: ಡಿ.07: ನಗರದ ದಕ್ಷಿಣ, ರಾಜರಾಜೇಶ್ವರಿ ನಗರ ಹಾಗೂ ಮಹದೇವಪುರ ವಲಯಗಳಲ್ಲಿ ಇಂದು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.
ವಲಯ ಆಯುಕ್ತರುಗಳ ಹಾಗೂ ವಲಯ ಜಂಟಿ ಆಯುಕ್ತರ ನಿರ್ದೇಶನದ ಮೇರೆಗೆ ಇಂದು ವಿವಿಧ ಸ್ಥಳಗಳಲ್ಲಿ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ನಾಗರೀಕರ ಓಡಾಟಕ್ಕೆ ಸಮಸ್ಯೆಯಾಗುತ್ತಿರುವುದನ್ನು ಗಮನಿಸಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.
ಪಾದಚಾರಿ ಮಾರ್ಗದಲ್ಲಿರುವ ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಅಕ್ರಮವಾಗಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪಾಲಿಕೆಯಿಂದ ನಿರಂತರವಾಗಿ ನಡೆಸಲಾಗುತ್ತಿದೆ.
ಪಾದಚಾರಿ ಮಾರ್ಗಗಳಲ್ಲಿ ಶಾಶ್ವತ ಪೆಟ್ಟಿಗೆಗಳು ಇದ್ದರೆ ಅದನ್ನು ಪಾಲಿಕೆ ವಶಕ್ಕೆ ಪಡೆದು ಮತ್ತೆ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡದಂತೆ ಕಟ್ಟೆಚ್ಚರಿಕೆಗಳನ್ನು ನೀಡಲಾಗುತ್ತಿದೆ.
ಅದರಂತೆ ಇಂದು ಪಾಲಿಕೆ *ದಕ್ಷಿಣ ವಲಯದ* ಜಯನಗರ 1ನೇ ಬ್ಲಾಕ್ ನ 3ನೇ ಅಡ್ಡರಸ್ತೆ, ಲಕ್ಕಸಂದ್ರ ವಾರ್ಡಿನ 16ನೇ ಅಡ್ಡರಸ್ತೆ. *ರಾಜರಾಜೇಶ್ವರಿ ನಗರ ವಲಯದ* ನಾಗರಭಾವಿ 2ನೇ ಹಂತದ 6ನೇ ಅಡ್ಡರಸ್ತೆ. *ಮಹದೇವಪುರ ವಲಯದ* ಹಳೆ ಏಪೋರ್ಟ್ ರಸ್ತೆ ಮಾರತಹಳ್ಳಿ ಸೇತುವೆ ಮುಖ್ಯರಸ್ತೆ ಯಲ್ಲಿ ಪಾದಚಾರಿ ಮಾರ್ಗ ಒತ್ತುವರಿಗಳನ್ನು ತೆರವುಗೊಳಿಸಲಾಗಿರುತ್ತದೆ.
ಓವರ್ ಹೆಡ್ ಕೇಬಲ್ ಗಳ ತೆರವು ಕಾರ್ಯಾಚರಣೆ:
ಮಹದೇವಪುರ ವಲಯ ವ್ಯಾಪ್ತಿಯ ಹಳೆ ಏಪೋರ್ಟ್ ರಸ್ತೆ ಮಾರತಹಳ್ಳಿ ಸೇತುವೆ ಮುಖ್ಯರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಓವರ್ ಹೆಡ್ ಕೇಬಲ್ ಗಳನ್ನು ತೆರವುಗೊಳಿಸಲಾಗಿದೆ.
ಓವರ್ ಹೆಡ್ ಕೇಬಲ್ ಗಳಿಂದ ನಗರದ ಸೌಂದರ್ಯಕ್ಕೆ ಧಕ್ಕೆಯುಂಟು ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವುದರ ಜೊತೆಗೆ ಅಪಘಾತಗಳಿಗೂ ಅವಕಾಶ ಮಾಡಿಕೊಡಲಿದೆ.
ತೆರವು ಕಾರ್ಯಾಚರಣೆಯ ವೇಳೆ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು.