ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ, 2020 (2020 ರ ಕರ್ನಾಟಕ ಅಧಿನಿಯಮ, 53) ರ 316 ರ ಪ್ರಕರಣಗಳೊಂದಿಗೆ ಓದಿಕೊಂಡು, 66, 67 ಮತ್ತು 130 ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ರಚಿಸಲು ಉದ್ದೇಶಿಸಿರುವ 316 ರ ಪ್ರಕರಣದ ಉಪ ಪ್ರಕರಣ (1) ರ ಕರಡನ್ನು ಸರ್ಕಾರದ ಅನುಮೋದನೆ ಪಡೆದು ಇದರಿಂದ ಭಾದಿತರಾಗುವ ಸಂಭವವಿರುವ ಎಲ್ಲ ವ್ಯಕ್ತಿಗಳ ಮಾಹಿತಿಗಾಗಿ, ಸದರಿ ಅಧಿನಿಯಮದ 316 ನೇ ಪ್ರಕರಣದ ಮೂಲಕ ಅಗತ್ಯಪಡಿಸಲಾದಂತೆ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅದನ್ನು ಅಧಿಕೃತ ರಾಜ್ಯಪತ್ರದಲ್ಲಿ ದಿನಾಂಕ: 20-07-2024ರಂದು ಪ್ರಕಟಿಸಿದ ದಿನಾಂಕದಿಂದ 30 ದಿನಗಳ ತರುವಾಯ, ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಈ ಮೂಲಕ ಸೂಚಿಸಲಾಗಿದೆ.
ರಾಜ್ಯಸರ್ಕಾರವು ಮೇಲೆ ನಿರ್ದಿಷ್ಟಪಡಿಸಲಾದ ಅವಧಿಯ ಮುಕ್ತಾಯಕ್ಕೆ ಮುಂಚೆ ಯಾರೇ ವ್ಯಕ್ತಿಯಿಂದ ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರುವು ಪರಿಗಣಿಸಲ್ಪಡುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ, ವಿಕಾಸಸೌಧ, ಬೆಂಗಳೂರು – 560001 ಇವರಿಗೆ ಕಳುಹಿಸಬಹುದು.