ಬಿಬಿಎಂಪಿಯ ಹಾಲಿ ಹಾಗೂ ಹೊಸ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳುವ ಬಗ್ಗೆ: ಮುಖ್ಯ ಆಯುಕ್ತರು.

0
52
Share this Article
0
(0)
Views: 1

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಪ್ರಸ್ತುತ ಆಸ್ಪತ್ರೆ, ಶಾಲಾ ಕಟ್ಟಡಗಳು ಸೇರಿದಂತೆ ಹಲವಾರು ಹೊಸ ಕಟ್ಟಡಗಳ ನಿರ್ಮಾಣದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿರುತ್ತದೆ. ಹೊಸ ಕಟ್ಟಡದ ಜೊತೆಗೆ ಹಾಲಿ ಕಟ್ಟಡಗಳ ನವೀಕರಣ ಹಾಗೂ ದುರಸ್ಥಿ ಕಾಮಗಾರಿಗಳನ್ನು ಸಹ ನಿರ್ವಹಿಸಲಾಗುತ್ತಿದೆ.

ಮುಂದುವರಿದು, ಈ ರೀತಿಯಾಗಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಹಾಗೂ ಹಾಲಿ ಕಟ್ಟಡಗಳ ನವೀಕರಣ/ದುರಸ್ಥಿ ಸೇರಿದಂತೆ ಆಟದ ಮೈದಾನಗಳ/ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಮಳೆ ನೀರು ಕೊಯ್ಲು ಕಾಮಗಾರಿಗಳನ್ನು ಅಳವಡಿಸಿಕೊಳ್ಳಬೇಕು.

ಕಟ್ಟಡಗಳ ಛಾವಾಣಿಯು ಸೇರಿದಂತೆ ಆವರಣಗಳಲ್ಲಿ ಸಂಗ್ರಹವಾಗುವ ಮಳೆ ನೀರನ್ನು ಸಂಗ್ರಹಸಿ ಶೌಚಾಲಯ ಹಾಗೂ ಇತರೆ ಉದ್ದೇಶಗಳಿಗೆ ಮರು ಬಳಕೆ ಮಾಡುವ ಕಾಮಗಾರಿಗಳು ಅಥವಾ ಒಂದು ವೇಳೆ ಮಳೆ ನೀರು ಸಂಗ್ರಹಣೆ ಸಾಧ್ಯವಿಲ್ಲದ ಪಕ್ಷದಲ್ಲಿ ಕಟ್ಟಡಗಳ ಆವರಣದಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಅಳವಡಿಸಿಕೊಂಡು ಮಳೆ ನೀರು ಪೋಲಾಗದಂತೆ ತಡೆಯಲು ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಕಛೇರಿ ಆದೇಶದ ಮೂಲಕ ಸೂಚಿಸಿರುತ್ತಾರೆ.*

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here