Views: 0
ಬೆಂಗಳೂರು, ಆಗಸ್ಟ್ 27
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಆಗಸ್ಟ್ 28 ರಂದು ಬೆಳಿಗ್ಗೆ 9.30 ಗಂಟೆಗೆ ಜಿ.ಕೆ.ವಿ.ಕೆ ಕೃಷಿ ವಿಶ್ವವಿದ್ಯಾನಿಲಯದ ಉತ್ತರ ಬ್ಲಾಕ್ ಸಭಾಂಗಣದಲ್ಲಿ “ಗ್ಲೋಬಲ್ ಬಯೋ ಇಂಡಿಯಾ ರೋಡ್ ಶೋ” ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ: ಎಸ್.ವಿ. ಸುರೇಶ್, ವಿಶೇಷ ಅತಿಥಿಗಳಾಗಿ ಶಿಕ್ಷಣ ನಿರ್ದೇಶಕರಾದ ಡಾ. ಕೆ.ಸಿ. ನಾರಾಯಣ್ವಾಮಿ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿ ವಿಶ್ವವಿದ್ಯಾನಿಲಯದ ಡೀನ್ (ಡೀನ್) ಡಾ. ಎನ್. ಬಿ ಪ್ರಕಾಶ್ ವಹಿಸುವರು.
ಬಯೋನೆಸ್ಟ್ ಅಗ್ರಿ ಇನ್ನೋವೇಶನ್ ಸೆಂಟರ್ ಸುಧಾರಿತ ಆಣ್ವಿಕ ಜೀವಶಾಸ್ತ್ರ ಮತ್ತು ಜೈವಿಕ ತಂತ್ರಜ್ಞಾನದೊಂದಿಗೆ ಅತ್ಯಾಧುನಿಕ ಪ್ರಯೋಗಾಲಯಗಳನ್ನು ಹೊಂದಿದೆ. ಕಾರ್ಯಕ್ರಮದಲ್ಲಿ ಅಗ್ರಿ ಸ್ಟಾರ್ಟ್‍ಅಪ್‍ಗಳು, ಉದ್ಯಮಿಗಳು, ವಿಜ್ಞಾನಿಗಳು, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಎಂಜಿನಿಯರಿಂಗ್ ಮತ್ತು ವ್ಯಾಪಾರ ನಿರ್ವಹಣಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.