ಬೆಂಗಳೂರು ನಗರ ಜಿಲ್ಲೆ, ಜನವರಿ 07 ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿನ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಾಗಿ ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು https://sevasindhu.karnataka.gov.in/Sevasindhu/Departmentservices ಅರ್ಜಿಯನ್ನು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಆನ್ ಲೈನ್ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಜನವರಿ 21ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು, ನಗರ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರನ್ನು , ತಾಲ್ಲೂಕು ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶಗಳ ಪುನರ್ವಸತಿ ಕಾರ್ಯಕರ್ತರುಗಳನ್ನು (ದಕ್ಷಿಣ ವಲಯ ನಂ-8861328076, ಉತ್ತರ ವಲಯ-7411520526, ಪೂರ್ವ ವಲಯ ನಂ-95906769575, ಯಲಹಂಕ ನಂ-9590676975, ಆನೇಕಲ್ ನಂ-8748903812) ಹಾಗೂ ಜಿಲ್ಲಾ ಅಂಗವಿಕರಲ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರ್ಸತೆ, ಬೆಂಗಳೂರು ನಗರ ಜಿಲ್ಲೆ-560 029 ಅಥವಾ ದೂರವಾಣಿ ಸಂಖ್ಯೆ : 080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣಿಯಲ್ಲಿ ತಿಳಿಸಿದ್ದಾರೆ.