ಬಡತನ, ಪೋಷಕರ ನಿರ್ಲಕ್ಷ್ಯದ ಕಾರಣ ವಿಶ್ವದಾದ್ಯಂತ ಕೋಟ್ಯಾಂತರ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಲೇ ಇದ್ದಾರೆ. ಓದುವ ವಯಸ್ಸಿನಲ್ಲಿ ದುಡಿಯಲು ಹೋಗಿ ಸುಂದರವಾದ ಬಾಲ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.
ಅರಳುವ ವಯಸ್ಸಿನಲ್ಲಿ ದುಡಿಯುವ ಅನಿವಾರ್ಯತೆಗೆ ಸಿಲುಕಿ ಭವಿಷ್ಯವನ್ನು ಅಭದ್ರ ಮಾಡಿಕೊಳ್ಳುತ್ತಿರುವುದು ನಿಜಕ್ಕೂ ಖೇದಕರ. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿರುವ ಬಾಲಕಾರ್ಮಿಕತನವನ್ನು ತೊಡೆದು ಹಾಕುವ ಉದ್ದೇಶದಿಂದ ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.