ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 08
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತಿ ವತಿಯಿಂದ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪು ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಜನಾಂಗದವರಾದ ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು. ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಎಸ್.ಎಫ್,2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯರಸ್ತೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಸಂಖ್ಯೆ: www.kmdconline.karnataka.gov.in ಅಥವಗಾ ದೂರವಾಣಿ ಸಂಖ್ಯೆ: 080-22114817 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ವಿಭಾಗದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದ ಜಿಲ್ಲಾ ವ್ಯವಸ‍್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.