Views: 0
ಶಿವಮೊಗ್ಗ, ಮೇ -31:
2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತರ ಮಕ್ಕಳ ವ್ಯಾಸಂಗಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ನೀಡಲಾಗುವ ಮಾಜಿ ಸೈನಿಕ ಮೀಸಲಾತಿ ಹಾಗೂ ಇತರೆ ಸೌಲಭ್ಯಗಳಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ವಿತರಿಸಲಾಗುವ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಕೊನೆಯ ದಿನಾಂಕದವರೆಗೆ ಕಾಯದೇ ಸೂಕ್ತ ಸಮಯದಲ್ಲಿ ಪಡೆದುಕೊಳ್ಳಲು ಕೋರಿದೆ.
ಎಲ್ಲಾ ವೃತ್ತಿಪರ ಶಿಕ್ಷಣಗಳಿಗಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ.ಸಿ.ಇ.ಟಿ) ಮಾಜಿ ಸೈನಿಕ ಕೋಟಾದಡಿಯಲ್ಲಿ ಅರ್ಜಿ ಸಲ್ಲಿಸಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ವಿತರಿಸಲಾಗುವ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಒಂದು ವೇಳೆ ಅಪ್ಲೋಡ್ ಮಾಡದಿದ್ದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯನ್ನು ಜೂನ್- 03 ರೊಳಗಾಗಿ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಸಂಪರ್ಕಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.