ಮಾನವಾಭಿವೃದ್ಧಿಗೆ ಕಂಟಕವಾಗಿರುವ ತಂಬಾಕು ಸೇವನೆ ಇಲ್ಲವಾಗಿಸಿವುದು ಇಂದಿನ ಅತ್ಯಗತ್ಯ: ರಾಜ್ವೇವರಿ ಎನ್ ಹೆಗಡೆ

0
43
Share this Article
0
(0)
Views: 0
 
 
ದಾವಣಗೆರೆ ಮೇ.31:
 
ಮಾನವಾಭಿವೃದ್ಧಿಗೆ ಕಂಟಕವಾಗಿರುವ ತಂಬಾಕು ಸೇವನೆಯ ಪಿಡುಗನ್ನು ಸಂಪೂರ್ಣವಾಗಿ ಇಲ್ಲವಾಗಿಸಿವುದು ಇಂದಿನ ಅತ್ಯಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜ್ವೇವರಿ ಎನ್. ಹೆಗಡೆ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ವಕೀಲರ ಸಂಘ, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಪಿಜಿ ಸೆಂಟರ್ ಹಾಗೂ ವಿ.ಎಸ್ ಪ್ಯಾರಾಮೆಡಿಕಲ್ ಕಾಲೇಜ್, ದಾವಣಗೆರೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಶ್ವ ಆರೋಗ್ಯ ಸಂಸ್ಥೆಯು 1987 ರಿಂದ ಮೇ-31ನ್ನು “ವಿಶ್ವ ತಂಬಾಕು ರಹಿತ ದಿನ”ವನ್ನಾಗಿ ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಪ್ರತಿ ಒಂದೊಂದು ಘೋಷಣಾ ವಾಕ್ಯದೊಂದಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು, ಸಾವು-ನೋವುಗಳು, ವಿವಿಧ ಅಸಾಂಕ್ರಾಮಿಕ ಕಾಯಿಲೆಗಳಿಗೆ ತುತ್ತಾಗುವುದರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಜನರ ಗಮನ ಸೆಳೆಯುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತಿದೆ.
ತಂಬಾಕು ಪ್ರತಿ ವರ್ಷ ವಿಶ್ವದಾದ್ಯಂತ 8 ಮಿಲಿಯನ್ ಜೀವಗಳನ್ನ ತೆಗೆದುಕೊಳ್ಳುತ್ತಿದೆ, ಅದೇ ರೀತಿ ತಂಬಾಕು ಉದ್ಯಮವು ಹೊಸದಾಗಿ 8 ಮಿಲಿಯನ್ ಬಳಕೆದಾರರನ್ನು ಹುಡುಕುತ್ತಿದೆ. ಸುಮಾರು 15000 ಕ್ಕೂ ಹೆಚ್ಚು ಸುವಾಸನೆ ಭರಿತ ಉತ್ಪನ್ನಗಳನ್ನು ತಯಾರಿಸಿ ಮಕ್ಕಳನ್ನು ಆಕರ್ಷಿತಗೊಳಿಸುವುದಾಗಿದೆ. ತಂಬಾಕು ಕಂಪನಿಯವರು ಸಾಮಾಜಿಕ ಮಾಧ್ಯಮ ಹಾಗೂ ಮಾರ್ಕೇಟಿಂಗ್ ಮುಖಾಂತರ ಮಕ್ಕಳನ್ನು ಪ್ರೇರೇಪಿಸುವುದು. ನಗರ ಪ್ರದೇಶಗಳಲ್ಲಿ ಯುವಕರಿಗೆ ಉಚಿತವಾಗಿ ತಂಬಾಕು ಉತ್ಪನ್ನಗಳನ್ನು ನೀಡಿ ದಾಸರನ್ನಾಗಿ ಮಾಡುವುದು ಶಾಲೆ, ಕಾಲೇಜುಗಳ ಬಳಿಯಲ್ಲಿ ಹೆಚ್ಚಿನದಾಗಿ ಪ್ರಚಾರ ನೀಡಿ ಮಕ್ಕಳನ್ನು ಆಕರ್ಷಿಸುವುದು. ತಂಬಾಕು ಉದ್ಯಮವು ಯುವಕರಲ್ಲಿ ಹಸ್ತಕ್ಷೇಪ ತೊರಿಸುವ ಮುನ್ನ ಜಾಗೃತರಾಗಿ, ಯುವ ಜನಾಂಗಕ್ಕೆ, ತಂದೆ ತಾಯಂದಿರಲ್ಲಿ, ಸಾರ್ವಜನಿಕರಲ್ಲಿ ಹಾಗೂ ಸಂಘ ಸಂಸ್ಥೆಗಳಲ್ಲಿ ಇದರ ಬಗ್ಗೆ ಅರಿವು ಮೂಡಿಸಿ ತಂಬಾಕು ಮುಕ್ತ ಯುವ ಪೀಳಿಗೆಯನ್ನಾಗಿಸುವುದು ವಿಶ್ವ ತಂಬಾಕು ರಹಿತ ದಿನಾಚರಣೆಯ ಉದ್ದೇಶವಾಗಿದೆ ಎಂದರು ತಿಳಿಸಿದರು.
ಈ ವರ್ಷ “ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು” ಎಂಬ ಘೋಷವಾಕ್ಯದಡಿ ಆಚರಿಸಲಾಗುತ್ತಿದೆ. ಕರ್ನಾಟಕದಲ್ಲಿ ಪ್ರತಿ ನಿತ್ಯ 293 ಮಕ್ಕಳು 13 ರಿಂದ 15 ರ ವಯೋಮಾನದವರು ಹೊಸದಾಗಿ ತಂಬಾಕು ಸೇವನೆಗೆ ದಾಸರಾಗುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ 2022 ರ ವರದಿಯ ಪ್ರಕಾರ ವಿಶ್ವದಾದ್ಯಂತ 37 ಮಿಲಿಯನ್ ಮಕ್ಕಳು ಯಾವುದಾದರೂ ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಇದೇ ರೀತಿ ಮುಂದುವರೆದಲ್ಲಿ ಕ್ಯಾನ್ಸರ್ ನಂತಹ ಭಯಾನಕ ಕಾಯಿಲೆಗೆ ತುತ್ತಾಗಿ ನಮ್ಮ ಯುವ ಸಮೂಹವೇ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಇನ್ನು ಹೆಚ್ಚಿನ ಮಟ್ಟದಲ್ಲಿ ತಂಬಾಕು ಉತ್ಪನ್ನಗಳ ಜಾಗೃತಿ ಕಾರ್ಯಕ್ರಮಗಳಿಗೆ ನಾವೆಲ್ಲರು ಕೈಜೋಡಿಸೋಣ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಮಹಾವೀರ್ ಮ. ಕರೆಣ್ಣ ಅವರು ಭಿತ್ತಿ ಪತ್ರ ಬಿಡುಗಡೆ ಮಾಡಿ ಮಾತನಾಡಿ ತಾತ್ಕಾಲಿಕವಾಗಿ ಸಿಗುವ ಸಂತೋಷ, ಮೋಜು, ಮಸ್ತಿ ಸಿಗುವ ಕಾರಣಕ್ಕೆ ಯುವ ಪೀಳಿಗೆಗಳು ತಂಬಾಕಿಗೆ ದಾಸರಾಗುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಯುವಜನರು ತಂಬಾಕಿನಿಂದ ದೂರ ಇರಬೇಕು. ಕೆಡುಕಿಗೆ ಆಕರ್ಷಣೆ ಹೆಚ್ಚು. ಬೀಡಿ, ಸಿಗರೇಟು ಸೇರಿದಂತೆ ತಂಬಾಕನ್ನು ಬೇರೆ ಬೇರೆ ರೂಪಗಳಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ, ಇದು ಕೇವಲ ಜೀವನವಷ್ಟೆಆಲ್ಲದೆ ಆರ್ಥಿಕ ನಷ್ಟವನ್ನೂ ತರುತ್ತದೆ. ಆದ್ದರಿಂದ ತಂಬಾಕಿನಿಂದ ದೂರವಿದ್ದು ನಮ್ಮ ದೇಹದ ಶ್ವಾಸಕೋಶ ಕಾಪಡುವಲ್ಲಿ ನಾವೆಲ್ಲರು ಶ್ರಮಿಸೋಣ ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ನೋಡಲ್ ಅಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ, ಜಿಲ್ಲಾ ಆರೋಗ್ಯ ಮತ್ತು ಕು.ಕ. ಅಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿ ಡಾ.ಷಣ್ಮುಖಪ್ಪ.ಎಸ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಾಗೇಂದ್ರಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್ ಅರುಣಕುಮಾರ್, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದ ಕಾರ್ಯಕ್ರಮಾಧಿಕಾರಿ ಡಾ.ತಿಪ್ಪೇಸ್ವಾಮಿ, ಪಾಲಿಕೆ ಆರೋಗ್ಯಾಧಿಕಾರಿ ಡಾ.ಚಂದ್ರಮೋಹನ್.ಡಿ.ಎಂ, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜಿನ ಅಧ್ಯಕ್ಷರಾದ ಡಾ.ಮೃತ್ಯುಂಜಯ ಎನ್ ಹಿರೇಮಠ, ಪ್ರಾಚಾರ್ಯರಾದ ಡಾ.ಜ್ಞಾನೇಶ್ವರ್.ಎಲ್.ಎಂ, ವಿ.ಎಸ್.ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಶ್ವೇತಾ ರಘುನಾಥ್, ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here