ಜುಲೈ 5 ರಂದು ಅಂಚೆ ಇಲಾಖೆ ಜೀವ ವಿಮೆ ಉತ್ಪನ್ನಗಳ ಮಾರಾಟ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ
ಧಾರವಾಡ ಜೂನ್ 19:
ಧಾರವಾಡ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾವಿಸಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜುಲೈ 5,2024 ರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಧಾರವಾಡದ ಕೆ.ಸಿ ಪಾರ್ಕ್ ಹತ್ತಿರದ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳ ಅರ್ಹತಾ ನಿಯಮಗಳು: ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಂಜಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ರೂ.5000/- ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ (ಓSಅ) ಅಥವಾ ಕಿಸಾನ ವಿಕಾಸ ಪತ್ರ (ಏಗಿP) ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ್ ನೀಡಲಾಗುವುದು. ನಿಗದಿತ ವೇತನವು ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ಜೀವ ವಿಮಾ ಕಂಪನಿ, ಸಂಘ ಸಂಸ್ಥೆಗಳ ಏಜೆಂಟ್ ಆಗಿರಬಾರದು ಎಂದು ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.