ಮುಖ್ಯಮಂತ್ರಿಗಳ ಕಚೇರಿಯಿಂದ ಪ್ರಕಟಣೆ

0
47
Share this Article
0
(0)
Views: 0

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ನಗರಸಭೆಯಲ್ಲಿ ಕಸ ವಿಲೇವಾರಿ ಹಾಗೂ ಕಸ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ. ನಗರದ ಹಲವಾರು ಕಡೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಸ ಸಂಗ್ರಹಣೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿದ್ದಾರೆ. 

ಇದೀಗ ಸದರಿ ಸ್ಥಳದಲ್ಲಿ ದಿನಂಪ್ರತಿ ಲಭ್ಯವಿರುವ ಪೌರಕಾರ್ಮಿಕರಿಂದ ಕಸ ನಿರ್ವಹಣೆಯನ್ನು ಮಾಡಲಾಗುತ್ತಿದೆ. ಶ್ರೀ ಸಿದ್ದರಾಮೇಶ್ವರ ದೇವಸ್ಥಾನದ ಹತ್ತಿರ ಸ್ಥಳದಲ್ಲಿ ಯಾವುದೇ ಕಸ ಬೀಳದಂತೆ ಎಚ್ಚರ ವಹಿಸಲಾಗುತ್ತಿದ್ದು, ಸ್ಥಳವು ಕಸಮುಕ್ತವಾಗಿದೆ. ನಗರಸಭೆ ವತಿಯಿಂದ ದಿನನಿತ್ಯ ಸ್ವಚ್ಛಗೊಳಿಸಲಾಗುತ್ತಿದೆ. ಜೊತೆಗೆ ʼಸಾರ್ವಜನಿಕರು ಕಸವನ್ನು ಎಸೆಯಬಾರದು, ಕಸವನ್ನು ಹಾಕಿದ್ದಲ್ಲಿ ದಂಡ ವಿಧಿಸಲಾಗುವುದುʼ ಎಂಬ ಎಚ್ಚರಿಕೆಯುಳ್ಳ ಬ್ಯಾನರ್‌ ಹಾಕಿಸಲಾಗಿದೆ.

ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ 

@osd_cmkarnataka `ಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here