ಬೆಂಗಳೂರು, ಜುಲೈ 03
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ (6ರಿಂದ 10ನೇ ತರಗತಿ) ಪ್ರವರ್ಗ-1,2ಎ,2ಬಿ,3ಎ,3ಬಿ. ಪ.ಜಾತಿ/ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರ.ವರ್ಗ-1, ಎಸ್.ಸಿ. ಮತ್ತು ಎಸ್.ಟಿ ವರ್ಗದವರಿಗೆ ರೂ.1.00 ಲಕ್ಷ ., ಪ್ರವರ್ಗ -2ಎ,2ಬಿ,3ಎ,3ಬಿ ಮತ್ತು ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.44,500/- ಮಿತಿ ಹೊಂದಿರಬೇಕು.
ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://shp.karnataka.gov.in/bcwd ನಲ್ಲಿ ಜುಲೈ 10ರೊಳೆಗೆ ಅರ್ಜಿಯನ್ನು ಸಲ್ಲಿಸಬಹುದು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಗಳ ಪಡೆಯಲು ಇಲಾಖೆಯ ವೆಬ್ ಸೈಟ್ www.bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಿ.ವಿ.ಗೋಪುರ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು ನಗರ ಜಿಲ್ಲೆ ಅಥವಾ ಇಲಾಖೆಯ ಸಹಾಯವಾಣಿ ಸಂಖ್ಯೆ :080-22867628 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.