Views: 0
ದಾವಣಗೆರೆ; ಮೇ 29:
ಮೇ 31 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಹಾನಗರಪಾಲಿಕೆ ಸಭಾಂಗಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ವಕೀಲರ ಸಂಘ, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜ್, ಪಿ.ಜಿ.ಸೆಂಟರ್ ಹಾಗೂ ವಿ.ಎಸ್ ಪ್ಯಾರಾಮೆಡಿಕಲ್ ಕಾಲೇಜು ದಾವಣಗೆರೆ ಇವರ ಸಂಯುಕ್ತಾಶ್ರಾಯದಲ್ಲಿ ಆಯೋಜಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ.ಎನ್.ಹೆಗಡೆ ಕಾರ್ಯಕ್ರಮ ಉದ್ಘಾಟಿಸುವರು. ಮಹಾನಗರಪಾಲಿಕೆ ಆಯುಕ್ತರಾದ ರೇಣುಕ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಕಾರ್ಯಕ್ರಮ ಅಧಿಕಾರಿ ಡಾ.ಜಿ.ಡಿ.ರಾಘವನ್ ಪ್ರಾಸ್ತಾವಿಕ ನುಡಿಗಳಾನ್ನಾಡುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣವರ ಭಿತ್ತಿ ಪತ್ರ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ನೋಡಲ್ ಅಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ, ಜಿಲ್ಲಾ ಆರೋಗ್ಯ ಮತ್ತು ಕು.ಕ. ಅಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿ ಡಾ.ಷಣ್ಮುಖಪ್ಪ.ಎಸ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಾಗೇಂದ್ರಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯಪ್ಪ.ಬಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್ ಅರುಣಕುಮಾರ್, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದ ಕಾರ್ಯಕ್ರಮಾಧಿಕಾರಿ ಡಾ.ತಿಪ್ಪೇಸ್ವಾಮಿ, ಪಾಲಿಕೆ ಆರೋಗ್ಯಾಧಿಕಾರಿ ಡಾ.ಚಂದ್ರಮೋಹನ್.ಡಿ.ಎಂ, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜಿನ ಅಧ್ಯಕ್ಷರಾದ ಡಾ.ಮೃತ್ಯುಂಜಯ ಎನ್ ಹಿರೇಮಠ, ಪ್ರಾಚಾರ್ಯರಾದ ಡಾ.ಜ್ಞಾನೇಶ್ವರ್.ಎಲ್.ಎಂ,ವಿ.ಎಸ್.ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಶ್ವೇತಾ ರಘುನಾಥ್ ಭಾಗವಹಿಸುವರು.