ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 06:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ತಾಲ್ಲೂಕು ಹಾಗೂ ಪೂರ್ವ ತಾಲ್ಲೂಕುಗಳ ಮ್ಯಾನುವೆಲ್ ಸ್ಕಾವೆಂಜರ್ಸ್ ವೃತ್ತಿಯಲ್ಲಿ ತೊಡಗಿರುವ ಸಮೂದಾಯದವರ ಏಳಿಗೆಗಾಗಿ ಅಥವಾ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಮೂದಾಯದವರಾದ ಸ್ಥಳೀಯರು ಬೆಂಗಳೂರು ಉತ್ತರ ಉಪ ವಿಭಾಗ ಮಟ್ಟದ ಮ್ಯಾನುವೆಲ್ ಸ್ಕಾವೆಂಜರ್ಸ್ ಅಧಿಕಾರೇತರ ಸದಸ್ಯತ್ವ ಸ್ಥಾನಕ್ಕೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಎನ್.ಇ.ಎಸ್. ಪ್ರಥಮ ದರ್ಜೆ ಕಾಲೇಜು ಪಕ್ಕ ಯಲಹಂಕ, ಬೆಂಗಳೂರು -560 064 ಇಲ್ಲಿ ಡಿಸೆಂಬರ್ 21 ರೊಳಗಾಗಿ ಕಚೇರಿಯ ವೇಳೆಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-28461315 ಅಥವಾ ಇ-ಮೇಲ್ tswdblr.north@gmail.com ಅನ್ನು ನೋಡಬಹುದಾಗಿದೆ ಎಂದು ಬೆಂಗಳೂರು ಉತ್ತರ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಬೆಂಗಳೂರು ಉತ್ತರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.