ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 27
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಏಕಲವ್ಯ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಮತ್ತು ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯ ಅರ್ಜಿಗಳನ್ನು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
*ಏಕಲವ್ಯ ಪ್ರಶಸ್ತಿ:* ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
*ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ:* 2023-24ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತಿದೆ. ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
*ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ:* 2022 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಅದರಂತೆ 2023ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು/ ತರಬೇತುದಾರರುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಆನ್ಲೈನ್ (ವೆಬ್ಸೈಟ್: https://sevasindhu.karnataka.gov.in) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಳಿಗೆ ಅರ್ಜಿ ಗಳನ್ನು ಸೆಪ್ಟೆಂಬರ್ 18 ರೊಳಗೆ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಛೇರಿಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೂರವಾಣಿ ಸಂಖ್ಯೆ ಹಾಗೂ ಗಣಕಯಂತ್ರ ನಿರ್ವಾಹಕರ ಮೊಬೈಲ್ ಸಂಖ್ಯೆ : 080-29787442 / 9632778567 ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.