ಧಾರವಾಡ ಜೂನ್.05:* ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 15 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿರುತ್ತದೆ. ಪ್ರತಿ ವರ್ಷದಂತೆ 2024-25ನೇ ಪ್ರಸಕ್ತ ಸಾಲಿಗೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮಾ ಕೋರ್ಸ್‍ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಂಗತರಬೇತಿ ಪಡೆಯುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು 18 ರಿಂದ 28 ವರ್ಷಗಳು ತುಂಬಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿ ವೇತನ ನೀಡಲಾಗುವುದು.
ಆಸಕ್ತಿವುಳ್ಳ ವಿದ್ಯಾರ್ಥಿಗಳು ವೆಬ್‍ಸೈಟ್ http://rangayanamysore.karnataka.gov.in ನಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 20, 2024 ಸಂಜೆ 5.30 ರೊಳಗೆ ಅಂಚೆಯ ಮೂಲಕ ಅಥವಾ ಉಪನಿರ್ದೇಶಕರ ಕಚೇರಿ ರಂಗಾಯಣ ಮೈಸೂರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0821-2512639, 9148827720 ಗೆ ಅಥವಾ ವೆಬ್‍ಸೈಟ್ http://rangayanamysore.karnataka.gov.in ಸಂಪರ್ಕಿಸಬಹುದು ಎಂದು ಧಾರವಾಡ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.