ಬಳ್ಳಾರಿ,ಆ.06
ಪ್ರಸ್ತಕ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಶಿಕ್ಷಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ವೆಬ್‌ಸೈಟ್ ಕೊಂಡಿ http://www.schooleducation.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆ.16 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಉಮಾದೇವಿ ಅವರು ತಿಳಿಸಿದ್ದಾರೆ.