ಬೆಂಗಳೂರು, ಸೆಪ್ಟೆಂಬರ್ 11
ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶನಾಲಯದ ಬೇಕಿಂಕ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯಲ್ಲಿ ರಾಷ್ಟ್ರೀಯ ಪೌಷ್ಠಿಕ ಸಪ್ತಾಹ-2024ವನ್ನು “ಎಲ್ಲರಿಗಾಗಿ ಪೌಷ್ಟಿಕ ಆಹಾರಗಳು” ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕೃಷಿ ವಿವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ:ಎಸ್.ವಿ. ಸುರೇಶ ಅವರು ಉದ್ಘಾಟಿಸಿ ಮಾತನಾಡಿದರು. ಆರೋಗ್ಯಕರ ಮತ್ತು ರೋಗಮುಕ್ತ ಜೀವನಕ್ಕೆ ಕಾರಣವಾಗುವ ದೈನಂದಿನ ಆಹಾರದಲ್ಲಿ ಸಮತೋಲನ ಆಹಾರ ಮತ್ತು ಪೋಷಣೆಯ ಪ್ರಾಮುಖ್ಯತೆ ಬಗ್ಗೆ ಜಾಗೃತಿ ಮೂಡಿಸಲು, ರಾಷ್ಟ್ರೀಯ ಪೌಷ್ಠಿಕÀÀ ಸಪ್ತಾಹವನ್ನು ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಈ ಕಾರ್ಯಕ್ರಮವು ಸಮತೋಲನ ಆಹಾರದ ಮಹತ್ವ, ಪೂರ್ಣ ಪ್ರಮಾಣದ ಪೋಷಣೆಯ ಬಗ್ಗೆ ಜನರಿಗೆ ಶಿಕ್ಷಣ ನೀಡುವಗುರಿಯನ್ನು ಹೊಂದಿದೆ, ಒಟ್ಟಾರೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುವಲ್ಲಿ ಸರಿಯಾದ ಆಹಾರದ ಆಯ್ಕೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
2018 ರಿಂದ ಭಾರತ ಸರ್ಕಾರದ ಸೂಚನೆಯ ಮೇರೆಗೆ ರಾಷ್ಟ್ರೀಯ ಪೌಷ್ಠಿಕÀÀ ಸಪ್ತಾಹವನ್ನು ಪೌಷ್ಟಿಕ ಮಾಹೆಯಾಗಿ ಸೆಪ್ಟೆಂಬರ್ ತಿಂಗಳಲ್ಲಿ ಆಚರಿಸುತ್ತಾ ಜಾಗೃತಿ ಮೂಡಿಸಲಾಗುತ್ತಿದೆ. ಇದರ ಅಂಗವಾಗಿ ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲ್ಲಿ ರಾಷ್ಟ್ರೀಯ ಪೌಷ್ಠಿಕ ಸಪ್ತಾಹವನ್ನು ಆಚರಿಸಲಾಗುತ್ತಿದೆ. ನಮ್ಮ ಮುಂದಿನ ಪೀಳಿಗೆಗಾಗಿ ಅಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿರುವ ಮಣ್ಣು ಮತ್ತು ಸಸ್ಯಗಳನ್ನು ಸಂರಕ್ಷಿಸಿಸುವುದರಿಂದ ಉತ್ತಮ ಪೌಷ್ಟಿಕ ಆಹಾರವನ್ನು ಪಡೆಯಬಹುದು, ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ನಾವು ನಮ್ಮ ಆಹಾರ ಪದ್ದತಿ ಮತ್ತು ಜೀವನ ಶೈಲಿಯನ್ನು ಬದಲಾಯಿಸಬೇಕಾಗಿದೆ. ನಾವು ಆಹಾರ ಭದ್ರತೆಯ ಜೊತೆಗೆ ಪೋಷಕಾಂಶ ಭದ್ರತೆಗೆ ಒತ್ತು ನೀಡುವುದು ಅವಶ್ಯಕವಾಗಿದೆ ಹಾಗೂ ಹಸಿವಿನ ಸೂಚ್ಯಾಂಕವನ್ನು ಸುಧಾರಿಸುವ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ 14 ವಾರದ ಬೇಕರಿ ತಂತ್ರಜ್ಞಾನ ಕೋರ್ಸ್ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರಾದ ಡಾ.ಕೆ.ಪಿ. ರಘುಪ್ರಸಾದ್, ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯದ ಆಹಾರ ಮತ್ತು ಪೋಷಣೆ ವಿಭಾಗದ ಸಹ ಪ್ರಾಧ್ಯಾಪಕರು, ಡಾ. ವೈಜಯಂತಿ ಕಣಬೂರ್, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯ ಸಂಯೋಜಕರು ಮತ್ತು ಮುಖ್ಯಸ್ಥರಾದ ಡಾ.ಸವಿತಾ. ಎಸ್. ಮಂಗಾನವರ, ಡಾ. ಅಶ್ವಿನಿ ಮತ್ತು ಡಾ. ಪ್ರಕೃತಿರಾಜ್ ಗಂಗಾಡ್ಕರ್ ಮತ್ತಿತರರು ಉಪಸ್ಥಿತರಿದ್ದರು.