ರೈಲುಗಳ ಮೂಲಕ ಬೆಂಗಳೂರು ನಗರಕ್ಕೆ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸ ಸರಬರಾಜು

0
45
Share this Article
0
(0)
Views: 1

ಬೆಂಗಳೂರು, ಜುಲೈ 31

ಜುಲೈ 26 ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ರಾಜಸ್ಥಾನದಿಂದ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ. ಈ ಕುರಿತಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಅಗತ್ಯ ಕ್ರಮಗಳನ್ನು ವಹಿಸಲಾಗಿರುತ್ತದೆ.

ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೋಲಿಸ್ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿರುತ್ತಾರೆ.

ಸಂಬಂಧಿಸಿದಂತೆ ವ್ಯಾಪ್ತಿಯ ಅಂಕಿತಾಧಿಕಾರಿಗಳು ಮತ್ತು ಆಹಾರ ಸುರಕ್ಷತಾಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಪರಿಶೀಲನೆ ಸಂಧರ್ಭದಲ್ಲಿ ರಾಜಸ್ಥಾನದಿಂದ ಬಂದ ರೈಲಿನ ಮೂಲಕ ಸ್ವೀಕೃತವಾದ ಪಾರ್ಸೆಲ್‌ಗಳನ್ನು ನಿಲ್ದಾಣದ ಹೊರ ಆವರಣದಲ್ಲಿ ಸಾಗಾಣಿಕೆ ವಾಹನದಲ್ಲಿರಿಸಿರುವುದು ಕಂಡುಬಂದಿರುತ್ತದೆ. ಒಟ್ಟು 84 ಸಂಖ್ಯೆಯ ಪಾರ್ಸೆಲ್‌ಗಳಿದ್ದು ಅವುಗಳನ್ನು ಪರಿಶೀಲಿಸಲಾಗಿ ಪ್ರಾಣಿಯ ಮಾಂಸವಿರುವುದು ಕಂಡುಬಂದಿರುತ್ತದೆ. ಯಾವ ಪ್ರಾಣಿಯ ಮಾಂಸವೆಂದು ಖಚಿತಪಡಿಸಿಕೊಳ್ಳಲು ಮಾಂಸದ ಕಾನೂನಾತ್ಮಕ ಆಹಾರ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಸದರಿ ಮಾದರಿಯನ್ನು ವಿಶ್ಲೇಷಣೆಗಾಗಿ ಹೈದ್ರಾಬಾದ್‌ನಲ್ಲಿರುವ ICAR National Meat Research Institute, Chengicherla, Boduppal Post, Hyderabad-500092 ಸರ್ಕಾರಿ ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಸಲ್ಲಿಸಲಾಗಿರುತ್ತದೆ.

ಮುಂದುವರೆದು, ಈ ಕುರಿತಂತೆ ವಿಶ್ಲೇಷಣಾ ವರದಿ ಸಂಖ್ಯೆ:NMRI/MSIL/ 2024/00025/R, ದಿನಾಂಕ: 30.07.2024 ರ ಪರೀಕ್ಷಾ ವಿಧಾನ Molecular Biomarker Analysis (DNA) based on NMRI/MSIL/STP-001 ದಲ್ಲಿ S: Ovis aries (sheep) ಎಂಬ ವರದಿ ಬಂದಿರುತ್ತದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here