ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು ‘ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024″ ಪ್ರಶಸ್ತಿಯನ್ನು ನೀಡಲು ಹರ್ಷಿಸುತ್ತದೆ.
ಈ ಹಿನ್ನೆಲೆಯಲ್ಲಿ ದಿನಾಂಕ:27.09.2024 ರಂದು ಬೆಳಿಗ್ಗೆ 10 ಗಂಟೆಗೆ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧ, ಕೊಠಡಿ ಸಂಖ್ಯೆ 419 ರಲ್ಲಿ ನಡೆಯಲಿರುವ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024″ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿದೆ.
‘ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ಆಯ್ಕೆಯಾದ ಅಧಿಕಾರಿಗಳ ಪಟ್ಟಿ