Views: 0
ಮಡಿಕೇರಿ ಮೇ.20:-
ಪ್ರಸಕ್ತ 2024-25 ನೇ ಸಾಲಿನಲ್ಲಿ ಸೋಮವಾರಪೇಟೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಯಾವುದೇ ಶುಲ್ಕವಿಲ್ಲದೇ ಸರ್ಕಾರದ ವತಿಯಿಂದ ಊಟ, ವಸತಿ, ಸಮವಸ್ತ್ರ, ಶೂ, ಸಾಕ್ಸ್, ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಶುಚಿ ಸಂಭ್ರಮ ಕಿಟ್(ಸೋಪು, ಎಣ್ಣೆ, ಬ್ರಶ್, ಪೇಸ್ಟ್, ಪೌಡರ್), ಕಂಪ್ಯೂಟರ್ ಲ್ಯಾಬ್, ಆಟೋಪಕರಣಗಳು ಹಾಗೂ ಇತರೆ ಸೌಲಭ್ಯಗಳು ಮತ್ತು ನುರಿತ ಬೋಧಕರಿಂದ ಬೋಧನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕುಶಾಲನಗರ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ(9483116504), ಸೋಮವಾರಪೇಟೆ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ(9741747661), ಹೆಬ್ಬಾಲೆ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ(7348840070), ಕೊಡ್ಲಿಪೇಟೆಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ(7348840070), ಕುಶಾಲನಗರ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ(9740132356), ಸೋಮವಾರಪೇಟೆ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ(8861486871), ಶನಿವಾರಸಂತೆ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ(9353005485), ಕುಶಾಲನಗರ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ(9483116504) ಹಾಗೂ ಕುಶಾಲನಗರ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ(9845219512) ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.