ವಿವಿಧ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

0
36
Share this Article
0
(0)
Views: 1

ಬೆಂಗಳೂರು, ಜೂನ್ 11:

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಸಕ್ತ ರೈತ, ರೈತ ಮಹಿಳೆ ಮತ್ತು ವಿಸ್ತರಣಾ ಕಾರ್ಯಕರ್ತರಿಂದ ವಿವಿಧ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಮಟ್ಟದ ಪ್ರಶಸ್ತಿಗಳು (ರಾಜ್ಯ ವ್ಯಾಪ್ತಿ), ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ, ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ರಾಜ್ಯ ಮಟ್ಟದ ಪ್ರಶಸ್ತಿಗಳು (ಕೃವಿವಿ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 10 ಜಿಲ್ಲೆಗಳು), ಕ್ಯಾನ್ ಬ್ಯಾಂಕ್ ಅತ್ಯುತ್ತಮ ಕೃಷಿಕ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಜಿಲ್ಲಾ ಮಟ್ಟದ ಪ್ರಶಸ್ತಿಗಳು (ಕೃವಿವಿ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 10 ಜಿಲ್ಲೆಗಳು), ಜಿಲ್ಲಾ ಮಟ್ಟದ ಪ್ರಗತಿಪರ ರೈತ ಪ್ರಶಸ್ತಿ, ಜಿಲ್ಲಾ ಮಟ್ಟದ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ, ತಾಲ್ಲೂಕು ಮಟ್ಟದ ಪ್ರಶಸ್ತಿಗಳು (ಕೃವಿವಿ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 61 ತಾಲ್ಲೂಕುಗಳು), ತಾಲ್ಲೂಕು ಮಟ್ಟದ ಯುವ ರೈತ ಪ್ರಶಸ್ತಿ ಹಾಗೂ ತಾಲ್ಲೂಕು ಮಟ್ಟದ ಯುವ ರೈತ ಮಹಿಳೆ ಪ್ರಶಸ್ತಿಗಳಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ನವೆಂಬರ್ ತಿಂಗಳಲ್ಲಿ ಆಯೋಜಿಸಲಿರುವ ಕೃಷಿಮೇಳ-2024ರ ಸಂದರ್ಭದಲ್ಲಿ ನೀಡಲಾಗುತ್ತದೆ. ನಿಗದಿತ ಅರ್ಜಿ ನಮೂನೆಯು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಛೇರಿ, ವಿಸ್ತರಣಾ ನಿರ್ದೇಶಕರ ಕಛೇರಿ, ಜಿಕೆವಿಕೆ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳು (ಹಾಡೋನಹಳ್ಳಿ -ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ-ಮಾಗಡಿ, ಕಂದಲಿ-ಹಾಸನ, ಕೊನೇಹಳ್ಳಿ-ತಿಪಟೂರು, ವಿ.ಸಿ.ಫಾರಂ-ಮಂಡ್ಯ, ಕುರುಬೂರು ಫಾರಂ-ಚಿಂತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ) ವಿಸ್ತರಣಾ ಶಿಕ್ಷಣ ಘಟಕ (ನಾಗನಹಳ್ಳಿ-ಮೈಸೂರು)ದಲ್ಲಿ ದೊರೆಯುತ್ತದೆ.

ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.uasbangalore.edu.in ಲಭ್ಯವಿರುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಛೇರಿ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560 065 ಇವರನ್ನು ಅಥವಾ ದೂರವಾಣಿ ಸಂಖ್ಯೆ. 080-23330153 ಗೆ ಸಂಪರ್ಕಿಸಬಹುದಾಗಿದೆ ಎಂದು ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here