ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

0
31
Share this Article
0
(0)
Views: 0

ಬೆಂಗಳೂರು ನಗರ ಜಿಲ್ಲೆ, ಜೂನ್ 15:

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

      ಬಹು ಕೌಶಲ್ಯ ತಂತ್ರಜ್ಞ (ವಿದ್ಯುತ್) (MULTI SKILL TECHNICIAN (ELECTRICAL) ಗೆ 8ನೇ ತರಗತಿ ಉತ್ತೀರ್ಣರಾಗಿರಬೇಕು,. ಸ್ವಯಂ ಉದ್ಯೋಗದ ಟೈಲರ್ (SELF EMPLOYED TAILOR)ಗೆ 8ನೇ ತರಗತಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರಬೇಕು., ಸಹಾಯಕ ಸೌಂದರ್ಯ ಚಿಕಿತ್ಸಕ (ASSISTANT BEAUTY THERAPIST) ಗೆ 8ನೇ ತರಗತಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರಬೇಕು ಮತ್ತು ಡೊಮೆಸ್ಟಿಕ್ ಡೇಟಾ ಎಂಟ್ರಿ ಆಪರೇಟರ್ (DATA ENTRY OPERATOR) ಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು18-46 ವಯೋಮಿತಿಯೊಳಗಿರಬೇಕು. ಎರಡು ತಿಂಗಳ ಅವಧಿ ತರಬೇತಿ ನೀಡಲಾಗುತ್ತದೆ.

ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ ಪತ್ರ ಮತ್ತು ವಿದ್ಯಾರ್ಹತೆ ಪ್ರಮಾಣ ಪತ್ರ ಹೊಂದಿರಬೇಕು. 

ಆಸಕ್ತರು ನಿಗಧಿತ ಅರ್ಜಿ ನಮೂನೆಗಳನ್ನು ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1,1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ (ಸುಬ್ಬಯ್ಯ ಸರ್ಕಲ್), ಬೆಂಗಳೂರು-560027 ಇಲ್ಲಿ ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ಜುಲೈ 06ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22240449, 22240999 ಗೆ ಸಂರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here