ಬೆಂಗಳೂರು ನಗರ ಜಿಲ್ಲೆ, ಸೆಪ್ಟೆಂಬರ್ 19
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ವತಿಯಿಂದ 2024-25 ನೇ ಸಾಲಿನ ಬೆಂಗಳೂರು ನಗರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ -2, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ , ಭೂ ಒಡೆತನ ಯೋಜನೆಯಡಿ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ಒದಗಿಸುವ ಸಲುವಾಗಿ ಬೆಂಗಳೂರು ನಗರ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಸಫಾಯಿ ಕರ್ಮಚಾರಿಗಳು / ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಾಗಿರಬೇಕು ಹಾಗೂ ಅವರ ಅವಲಂಬಿತ ಕುಟುಂಬದವರಾಗಿರಬೇಕು ಮತ್ತು ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕನಿಷ್ಠ 21 ರಿಂದ 50 ವರ್ಷ ಮೇಲ್ಪಟ್ಟವರಾಗಿಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ. 3.00.000/- ಹಾಗೂ ನಗರ ಪ್ರದೇಶವಾದಲ್ಲಿ ರೂ.5.00.00/- ಮಿತಿಯೊಳಗಿರಬೇಕು. ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.
ನಗರಸಭೆ/ಪುರಸಭೆ/ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳಾಗಿ/ಗುತ್ತಿಗಿ/ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಿದ ಬಗ್ಗೆ ಸ್ಥಳೀಯ ಸಂಸ್ಥೆಗಳ ಅಧಿಕೃತ ಅಧಿಕಾರಿಗಳಿಂದ ಸೂಕ್ತ ದಾಖಲೆಗಳು/ಗುರುತಿನ ಚೀಟಿ, ಸಫಾಯಿ ಕರ್ಮಚಾರಿಗಳು/ಪೌರಕಾರ್ಮಿಕರು ವೃತ್ತಿಯಲ್ಲಿ ಕನಿಷ್ಠ 5 ವರ್ಷಗಳವರೆಗೆ ಕಾರ್ಯನಿರ್ವಹಿಸಿರುವ ಬಗ್ಗೆ ಪ್ರಮಾಣ ಪತ್ರ, ಆರ್.ಡಿ. ನಂಬರ್ ಹೊಂದಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ, ಅರ್ಜಿದಾರರ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ ಬುಕ್ ಪ್ರತಿ, ಇಚ್ಛಿಸುವ ಯೋಜನೆಗಳ ಯೋಜನಾ ವರದಿ ಹಾಗೂ ವಾಹನದ ಪರವಾನಗಿ ದಾಖಲಾತಿಗಳನ್ನು ಸಲ್ಲಿಸಬೇಕು.
ಆಸ್ತಕ ಅಭ್ಯರ್ಥಿಗಳು ಅರ್ಜಿಗಳನ್ನು ಜಾಲತಾಣ: www.https://sevasindhu.karnataka.gov.in ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್, ಇವುಗಳ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಜಿಲ್ಲಾ ಅಧಿಕಾರಿಗಳು, ಬೆಂಗಳೂರು ವಿಭಾಗ ಸೈರಾಬಾಗ್ ಕಟ್ಟಡ #19/4, ಕನ್ನಿಂಗ್ ಹ್ಯಾಮ್ ರಸ್ತೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-29550603 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.