ರಾಜ್ಯಾದ್ಯoತ ಇರುವ ಸರಕಾರಿ ಜಮೀನುಗಳನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿರುವ ಸಮಸ್ಯೆ ಮತ್ತು ಇವುಗಳನ್ನು ತೆರವುಗೊಳಿಸಲು ನಡೆಸಬೇಕಾದ ಹಲವು ವರ್ಷಗಳ ಕಾನೂನು ಹೋರಾಟಗಳು ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ಸರಕಾರಿ ಆಸ್ತಿಗಳನ್ನು ವೈಜ್ಞಾನಿಕವಾಗಿ ಗುರುತಿಸಿ, ಇವು ಖಾಸಗಿಯವರ ಪಾಲಾಗದಂತೆ ರಕ್ಷಿಸಿ, ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಲ್ಯಾಂಡ್ ಬೀಟ್ ಆಪ್ ಬಳಸಿಕೊಂಡು, ವಿವಿಧ ಜಮೀನುಗಳಲ್ಲಿರುವ ಸರಕಾರಿ ಭೂಮಿಯನ್ನು ಜಿಯೋ ಫೆನ್ಸಿಂಗ್ ಮಾಡಿ, ರಕ್ಷಣೆ ಮಾಡುವ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯು ಇಡೀ ರಾಜ್ಯದಲ್ಲಿಯೇ ಮುಂಚೂಣಿ ಸ್ಥಾನದಲ್ಲಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಆಸ್ತಿಗಳು ಇರುವ ಒಟ್ಟು 1,04,192 ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳ ಪೈಕಿ 79,628 ಸ್ಥಳಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ. ಈ ಆಸ್ತಿಗಳಿಗೆ ಜಿಯೋ ಫೆನ್ಸಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಇದು ರಾಜ್ಯದಲ್ಲಿಯೇ ಅತ್ಯಧಿಕ ಸಂಖ್ಯೆಯಾಗಿದೆ. ಈ ಜಮೀನುಗಳಲ್ಲಿರುವ ಸರಕಾರಿ ಆಸ್ತಿಗಳ ಬಗ್ಗೆ ಸಂಬoಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳು, ತಮ್ಮ ವ್ಯಾಪ್ತಿಯ ಕಂದಾಯ ನಿರೀಕ್ಷಕರಿಗೆ ಲ್ಯಾಂಡ್ ಬಿಟ್ ಆಪ್ ಮೂಲಕ ವರದಿ ನೀಡಿದ್ದು, ಸದ್ರಿ ವರದಿಯನ್ನು ಸಂಬoಧಪಟ್ಟ ತಾಲೂಕಿನ ತಹಶೀಲ್ದಾರ್ಗಳು ಅಂತಿಮಗೊಳಿಸುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೆ 62,163 ಸರಕಾರಿ ಆಸ್ತಿಗಳಿಗೆ ಸಂಪೂರ್ಣ ಜಿಯೋ ಫೆನ್ಸಿಂಗ್ ಮಾಡಲಾಗಿದ್ದು, ಈ ಮೂಲಕ ಜಿಲ್ಲೆಯ ಈ ಸರಕಾರಿ ಆಸ್ತಿಗಳ ಸಂಪೂರ್ಣ ಮಾಹಿತಿಯನ್ನು ತಂತ್ರಾoಶದಲ್ಲಿ ಅಳವಡಿಸಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಹೊನ್ನಾವರ ತಾಲೂಕಿನಲ್ಲಿನ 14,863 ಸರಕಾರಿ ಆಸ್ತಿಗಳಲ್ಲಿ , 12,282 ಆಸ್ತಿಗಳಿಗೆ ಜಿಯೋ ಫೆನ್ಸಿಂಗ್ ಕಾರ್ಯ ಮಾಡಲು ಸ್ಥಳ ಭೇಟಿ ನಡೆಸಿ ವರದಿ ನೀಡಿದ್ದು, 11,609 ಆಸ್ತಿಗಳಿಗೆ ಈಗಾಗಲೇ ಸಂಪೂರ್ಣ ಜಿಯೋ ಫೆನ್ಸಿಂಗ್ ಮಾಡಲಾಗಿದೆ. ಕುಮುಟಾ ತಾಲೂಕಿನ 14014 ಸರಕಾರಿ ಆಸ್ತಿಗಳಲ್ಲಿ 11,722 ಆಸ್ತಿಗಳಿಗೆ, ಸಿದ್ದಾಪುರ ತಾಲೂಕಿನ 14458 ಆಸ್ತಿಗಳಲ್ಲಿ 9837 ಆಸ್ತಿಗಳಿಗೆ, ಕಾರವಾರ ತಾಲೂಕಿನ 13828 ಆಸ್ತಿಗಳಲ್ಲಿ 7696 ಆಸ್ತಿಗಳಿಗೆ, ಶಿರಸಿ ತಾಲೂಕಿನ 14880 ಆಸ್ತಿಗಳಲ್ಲಿ 3907 ಆಸ್ತಿಗಳಿಗೆ, ಯಲ್ಲಾಪುರ ತಾಲೂಕಿನ 6228 ಆಸ್ತಿಗಳಲ್ಲಿ 4259 ಆಸ್ತಿಗಳಿಗೆ, ಅಂಕೋಲ ತಾಲೂಕಿನ 8145 ಆಸ್ತಿಗಳಲ್ಲಿ 4402 ಆಸ್ತಿಗಳಿಗೆ, ಭಟ್ಕಳ ತಾಲೂಕಿನ 6225 ಆಸ್ತಿಗಳಲ್ಲಿ 3919 ಆಸ್ತಿಗಳಿಗೆ, ಜೋಯಿಡಾ ತಾಲೂಕಿನ 5270 ಆಸ್ತಿಗಳಲ್ಲಿ 1675 ಆಸ್ತಿಗಳಿಗೆ, ಮುಂಡಗೋಡ ತಾಲೂಕಿನ 3743 ಆಸ್ತಿಗಳಲ್ಲಿ 2024 ಆಸ್ತಿಗಳಿಗೆ, ಹಳಿಯಾಳ ತಾಲೂಕಿನ 2154 ಆಸ್ತಿಗಳಲ್ಲಿ 1002 ಆಸ್ತಿಗಳಿಗೆ ಹಾಗೂ ದಾಂಡೇಲಿ ತಾಲೂಕಿನ 384 ಆಸ್ತಿಗಳಲ್ಲಿ 111 ಆಸ್ತಿಗಳಿಗೆ ಈಗಾಗಲೇ ಸಂಪೂರ್ಣ ಜಿಯೋ ಫೆನ್ಸಿಂಗ್ ಮಾಡಲಾಗಿದೆ.
ಈ ಲ್ಯಾಂಡ್ ಬೀಟ್ ಆಪ್ನಲ್ಲಿ, ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಮೀನುಗಳಾದ ಗೋಮಾಳ, ಹುಲ್ಲು ಬನ್ನಿ ಖರಾಬು, ಸರ್ಕಾರಿ ಫಡಾ, ಸರ್ಕಾರಿ ಖರಾಬು, ಸರ್ಕಾರಿ ಬೀಳು, ದನಗಳಿಗೆ ಮುಫತ್ತು, ಸರ್ಕಾರಿದಾರಿ, ಗುಂಡು ತೋಪು ಇತ್ಯಾದಿ ಹಾಗೂ ಸರ್ಕಾರಿ ಕೆರೆ ಮತ್ತು ಸರ್ಕಾರಿ ಸ್ಮಶಾನಗಳನ್ನು ಸಂಬoಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳು ಲ್ಯಾಂಡ್ ಬೀಟ್ ತಂತ್ರಾoಶದಲ್ಲಿ ಕಡ್ಡಾಯವಾಗಿ ಕ್ಷೇತ್ರ ಪರಿಶೀಲನೆ ಮಾಡಿದ್ದಾರೆ.
ಸರ್ಕಾರಿ ಜಮೀನುಗಳ ಪೈಕಿ ಅರಣ್ಯ ಜಮೀನುಗಳು, ಇತರೆ ಯೋಜನೆಗಳಿಗೆ ಸ್ವಾಧೀನಪಡಿಸಿಕೊಂಡ ಜಮೀನುಗಳು (ಭೂಸ್ವಾಧೀನ), ಶಾಲೆಗಳು ಮತ್ತು ಆಸ್ಪತ್ರೆಗಳು ಇತ್ಯಾದಿಗಳಂತಹ ಇತರ ಇಲಾಖೆಗಳ ಜಮೀನುಗಳನ್ನು ಒಳಗೊಂಡಿದ್ದು, ಇಂತಹ ಜಮೀನುಗಳನ್ನು ಕ್ಷೇತ್ರ ಪರಿಶೀಲನೆಗಾಗಿ ಮುಂದಿನ ದಿನಗಳಲ್ಲಿ ಆಯಾ ಇಲಾಖೆಗಳಿಗೆ ಕಳುಹಿಸಲು ತಂತ್ರಾoಶದಲ್ಲಿ ಅಗತ್ಯ ತಾಂತ್ರಿಕ ಬದಲಾವಣೆ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಶೇ.80 ರಷ್ಟು ಅರಣ್ಯ ಪ್ರದೇಶವಿದ್ದು, ಸರಕಾರದ ವಿವಿಧ ಯೋಜನೆಗಳಿಗೆ ಹಾಗೂ ವಸತಿ ಯೋಜನೆಗಳ ಫಲಾನುಭವಿಗಳಿಗೆ ಸೇರಿದಂತೆ ಅಗತ್ಯವಿರುವವರಿಗೆ ಭೂಮಿಯನ್ನು ಮಂಜೂರು ಮಾಡಲು ಸರಕಾರಿ ಭೂಮಿಯ ಕೊರತೆಯಿದೆ. ಅಲ್ಲದೇ ಈಗಾಗಲೇ ಸರಕಾರಿ ಭೂಮಿ ಒತ್ತುವರಿಯಾಗಿದ್ದಲ್ಲಿ ಅದನ್ನು ತೆರವುಗೊಳಿಸುವ ಪ್ರಕ್ರಿಯೆಯು ದೀರ್ಘವಾಗಿರುವ ಜೊತೆಗೆ ಸಂಕೀರ್ಣವಾಗಿದೆ. ಸರಕಾರದ ಸೂಚನೆಯಂತೆ ಲ್ಯಾಂಡ್ ಬೀಟ್ ಆಪ್ ಮೂಲಕ ಜಿಲ್ಲೆಯಲ್ಲಿನ ಸರಕಾರಿ ಭೂಮಿಗಳನ್ನು ಗುರುತಿಸಿ, ಜಿಯೋ ಫೆನ್ಸಿಂಗ್ ಮಾಡುವ ಮೂಲಕ ಅವುಗಳನ್ನು ಸಂರಕ್ಷಿಸುವ ಕಾರ್ಯವನ್ನು ಸಮರೋಪಾದಿಯಲಿ ಕೈಗೊಂಡಿದ್ದು, ಈ ಕಾರ್ಯ ಪೂರ್ಣಗೊಂಡ ನಂತರ ಜಿಲ್ಲೆಯಲ್ಲಿ ಲಭ್ಯವಿರುವ ಸರಕಾರಿ ಜಮೀನಿನ ನಿಖರ ಪ್ರಮಾಣದ ಕುರಿತು ಸ್ಪಷ್ಟ ಚಿತ್ರಣ ದೊರೆಯಲಿದೆ. ಮುಂದಿನ ದಿನಗಳಲ್ಲಿ ಇವುಗಳ ಅತಿಕ್ರಮಣವಾಗದಂತೆ ತಡೆಯುವ ಮೂಲಕ ಸಾರ್ವಜನಿಕ ಉದ್ದೇಶಗಳಿಗೆ ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ದೊರೆಯಲಿದೆ. : ಗಂಗೂಬಾಯಿ ಮಾನಕರ, ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ.