ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳಂತೆಯೇ ಉತ್ತಮ ಗುಣಮಟ್ಟ ಕಾಯ್ದುಕೊಂಡು ಕಾರ್ಯ ನಿರ್ವಹಿಸಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

0
16
Share this Article
0
(0)
Views: 1
ಬೆಂಗಳೂರು, ಆಗಸ್ಟ್ 27
 
ಸರ್ಕಾರಿ ಆಸ್ಪತ್ರೆಗಳ ವೈದ್ಯರುಗಳು ಖಾಸಗಿ ಆಸ್ಪತ್ರೆಗಳ ವೈದ್ಯರುಗಳಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ರೀತಿಯಲ್ಲಿಯೇ, ಉತ್ತಮ ಗುಣಮಟ್ಟ ಕಾಯ್ದುಕೊಂಡು ರೋಗಿಗಳಿಗೆ ಸ್ಪಂದಿಸಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
 
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮುಖ್ಯ ಮಂತ್ರಿಗಳು, ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು. ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಇನ್ನು ಮುಂದೆ ದಿನದ 24 ಗಂಟೆ ಜಯದೇವ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.
 
ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ. ನಾನು ಸೇರಿ ಮಂತ್ರಿಗಳು, ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು.
 
ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್‍ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಸಮಯದ ಪ್ರಾಮುಖ್ಯತೆ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಕಾರ್ಯ ನಿರ್ವಹಿಸಬೇಕು. ಸಕಾಲದಲ್ಲಿ ಚಿಕಿತ್ಸೆ ನಿಡುವುದರ ಮೂಲಕ ರೋಗಗಳನ್ನು, ಗಾಯಾಳುಗಳನ್ನು ರಕ್ಷಿಸಬೇಕು ಎಂದು ತಿಳಿಸಿದರು.  
 
ಬಜೆಟ್‍ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆ ನೀಡಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಲಾಗಿದೆ. ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ ಎಂದು ತಿಳಿಸಿದರು. .
 
ರೋಗಿಗಳ ಸಮಸ್ಯೆಗಳನ್ನು ಸಂಯಮದಿಂದ ಕೇಳಿಸಿಕೊಂಡರೆ ಅರ್ಧ ಕಾಯಿಲೆ ಗುಣಮುಖವಾಗುತ್ತದೆ. ವೈದ್ಯರು ಮೊದಲು ರೋಗಿಗಳ ಸಮಸ್ಯೆಗಳನ್ನು ಆಲಿಸಬೇಕು. ನಂತರ ಸೂಕ್ತ ಚಿಕಿತ್ಸೆ ನೀಡುವುದು ವೈದ್ಯರ ಕರ್ತವ್ಯ. ಇದನ್ನು ಮನಗಂಡು ವೈದ್ಯರುಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
 
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲಾ, ಗ್ಯಾರಂಟಿ ಅನುμÁ್ಠನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here