ಸರ್ಕಾರಿ ಐಟಿಐ ಪ್ರವೇಶಾತಿಗೆ ಆನ್‍ಲೈನ್ ಅರ್ಜಿ ಆಹ್ವಾನ

0
42
Share this Article
0
(0)
Views: 0

ಬಳ್ಳಾರಿ,ಜೂ.05:

ಪ್ರಸ್ತಕ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿವಿಧ ವೃತ್ತಿಪರ ಕೋರ್ಸ್‍ಗಳಿಗೆ ಮೆರಿಟ್ ಕಮ್ ರಿಸರ್ವೇಶನ್ ಆಧಾರದ ಮೇಲೆ ಜಿಲ್ಲೆಯಲ್ಲಿ ಬರುವ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಜೂನ್ 09 ರ ಒಳಗಾಗಿ www.cite.karnataka.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಟಾಟಾ ಉದ್ಯೋಗ ಯೋಜನೆಯಡಿ ಆರಂಭಗೊಂಡಿರುವ ಮೂರು ಮತ್ತು ಹತ್ತು ತಿಂಗಳ ಧೀರ್ಘಾವಧಿಯ ವೃತ್ತಿಪರ ಕೋರ್ಸ್‍ಗಳಿಗೆ ಆನ್‍ಲೈನ್‍ನಲ್ಲಿ ಮೊದಲ ಆದ್ಯತೆ ಮೇರೆಗೆ ಪ್ರವೇಶಾತಿ ಪಡೆದುಕೊಳ್ಳಲಾಗುವುದು.

ಬೇಕಾದ ದಾಖಲೆಗಳು:

ಆಧಾರ್ ಕಾರ್ಡ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹೈ.ಕ (371ಜೆ) ಪ್ರಮಾಣ ಪತ್ರ, ಗ್ರಾಮೀಣ ಮಾಧ್ಯಮ ಪ್ರಮಾಣ ಪತ್ರ ಸೇರಿ ಇನ್ನಿತರೆ ಪೂರಕ ದಾಖಲಾತಿಗಳೊಂದಿಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಹಾಗೂ ಅನುತ್ತೀರ್ಣಗೊಂಡ ಆಸಕ್ತ ಅಭ್ಯರ್ಥಿಗಳು ನಗರದ ಕಂಟೋನ್‍ಮೆಂಟ್ ಬಳಿಯ ರೆಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‍ಮೆಂಟ್ ಬಳಿಯ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ದೂ.08392294527, ಮೊ.9902351985, 9448421922 ಅಥವಾ ಹತ್ತಿರದ ಐಟಿಐ ಕಾಲೇಜ್‍ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here