ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಪ್ರವೇಶ ಪ್ರಾರಂಭ

0
49
Share this Article
0
(0)
Views: 8

ಬೆಂಗಳೂರು ನಗರ ಜಿಲ್ಲೆ, ಜೂನ್ 06:

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಆಗಸ್ಟ್ -2024ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಸಂಸ್ಥೆಗಳಲ್ಲಿ ವಾರ್ಷಿಕ ರೂ.1200/- ಗಳು ಮಾತ್ರ ಭೋಧನ ಶುಲ್ಕವಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ತರಬೇತಿಗೆ ಅನುಕೂಲವಾಗುವ ಉಚಿತ ಪರಿಕರಗಳನ್ನು ವಿತರಿಸಲಾಗುವುದು.

Welder, Carpenter, Sheet Metal Worker, Surface Ornamentation Technique, Wireman, Dress Making, Sewing Technology, Mason Painter, Plumber ವೃತ್ತಿಗಳಿಗೆ 8ನೇ ತರಗತಿ ಉತ್ತೀರ್ಣರಾಗಿರಬೇಕು ಅಥವಾ 10ನೇ ತರಗತಿ ಅನುತ್ತೀರ್ಣ ಅಂಕಪಟ್ಟಿಯನ್ನು ಹೊಂದಿರುವ ವಿದ್ಯಾರ್ಥಿಗಳಿಗೂ ಸಹ ಐಟಿಐ ಗಳಲ್ಲಿ ತರಬೇತಿ ಹೊಂದಲು ಅವಕಾಶವಿರುತ್ತದೆ. ಉಳಿದಂತಹ ಇತರೆ ವಿವಿಧ ವೃತ್ತಿಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು.

ಐಟಿಐ ಗಳಲ್ಲಿ ಪ್ರವೇಶ ಬಯಸುವ ಅಭ್ಯರ್ಥಿಗಳು ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಪ್ರವೇಶ ಹೊಂದಬಹುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಂಟಿ ನಿರ್ದೇಶಕರ (ತರಬೇತಿ) ಮತ್ತು ಪದನಿಮಿತ್ತ ಜಂಟಿ ಶಿಶಿಕ್ಷು ಸಲಹೆಗಾರರು ವಿಭಾಗೀಯ ಕಛೇರಿ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೌಶಲ್ಯ ಭವನ, ಬನ್ನೇರುಘಟ್ಟ ರಸ್ತೆ, ಡೈರಿ ವೃತ್ತ, ಬೆಂಗಳೂರು-560 029 ಇಲ್ಲಿ ಸಂಪರ್ಕಿಸಬಹುದು ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರ (ತರಬೇತಿ) ಮತ್ತು ಪದನಿಮಿತ್ತ ಜಂಟಿ ಶಿಶಿಕ್ಷು ಸಲಹೆಗಾರರು, ವಿಭಾಗೀಯ ಕಛೇರಿಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here