ಬೆಂಗಳೂರು ಗ್ರಾಮಾಂತರ ಜಿಲ್ಲೆ:ಸೆಪ್ಟೆಂಬರ್ 14
2024-25ನೇ ಸಾಲಿನ ಕೃಷಿ ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಮತ್ತು ಅನುಗೊಂಡನಹಳ್ಳಿ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ(ATM) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು BSC.Agri/Allied Subject ಪದವಿಯೊಂದಿಗೆ ಕನಿಷ್ಠ 01 ವರ್ಷಗಳ ಕೃಷಿ ಅಥವಾ ಕೃಷಿ ಸಂಬಂದಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರುವವರು ಬಯೋಡೇಟಾದೊಂದಿಗೆ ಸಂಬಂಧಿತ ದಾಖಲಾತಿಗಳನ್ನು ಸೆಪ್ಟೆಂಬರ್ 30 ರೊಳಗೆ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೃಷಿ ಸಂಕೀರ್ಣ, ಎಸ್.ಕರಿಯಪ್ಪ ರಸ್ತೆ (ಕನಕಪುರ ರಸ್ತೆ) ಬನಶಂಕರಿ, ಬೆಂಗಳೂರು-560070 ಇಲ್ಲಿಗೆ ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು, ಆತ್ಮ ಯೋಜನೆ, ಬೆಂಗಳೂರು ಜಿಲ್ಲೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.