ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

0
325
Share this Article
4.4
(28)
Views: 276

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 26

ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದ್ದು ಜಮೀನಿನ ಸರ್ವೆ ನಕ್ಷೆ(ಸ್ಕೆಚ್)- ನಮೂನೆ 11 ಇ ಇರುವ ಮೋಜಣಿ ತಂತ್ರಾಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು 2016 ಅಕ್ಟೋಬರ್ 05 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು 2014 ಜುಲೈ 18 ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ.

ಮೇಲಿನ ಆಸ್ತಿಗಳನ್ನು ಹೊರತು ಪಡಿಸಿ ಅಂದರೆ ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ(ತಂತ್ರಾಶ)ವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ 2020 ಜನವರಿ 01 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.

ನಗರಾಭಿವೃದ್ಧಿ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುತ್ತಾರೆ. ಮುಂದುವರೆದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2, ತಂತ್ರಾಂಶದೊಂದಿಗೆ 2024 ಸೆಪ್ಟೆಂಬರ್. 07 ರಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶ ಸಂಖ್ಯೆ:ಕಂಇ/20/ಎಂಎನ್‌ಎಂಯು/2023, ದಿನಾಂಕ:23-09-2024 ರ ಆದೇಶದ ಮೂಲಕ ಆದೇಶಿಸಲಾಗಿದೆ. ಆದಕಾರಣ ದಿನಾಂಕ:07-09-2024 ರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಛೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕಿರುತ್ತದೆ.

ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರಿಗೆ ಆಗುವಂತಹ ಉಪಯೋಗಗಳು
ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು.
ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯ. ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು.
ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದು.

ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 4.4 / 5. Vote count: 28

No votes so far! Be the first to rate this post.

Leave a reply

Please enter your comment!
Please enter your name here