ಮುಖ್ಯಮಂತ್ರಿಗಳ ಕಚೇರಿಯಿಂದ ಪ್ರಕಟ
ಮಂಗಳೂರು ಜಿಲ್ಲೆಯ ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥರಾಗಿರುವ ಬಗ್ಗೆ ಮಾಧ್ಯಮದಲ್ಲಿ ಪ್ರಕಟವಾದ ವರದಿಗೆ ಸಂಬಂಧಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ.
ತ್ವರಿತವಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಸ್ಟೆಲ್‌ಗೆ ತೆರಳಿ ಆಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದ್ದಾರೆ. ಆಹಾರ ತಯಾರಿಕಾ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಲಾಗಿದೆ. ವಸತಿ ನಿಲಯದ ಅಡುಗೆ ಕೋಣೆಯ ಸ್ವಚ್ಛತೆಯನ್ನು ಕಾಯ್ದುಕೊಂಡು ವಿದ್ಯಾರ್ಥಿನಿಯರಿಗೆ ಶುದ್ಧ ಆಹಾರ ಮತ್ತು ಶುದ್ಧ ಕುಡಿಯುವ ನೀರು ಪೂರೈಸುವಂತೆ ಸೂಚಿಸಲಾಗಿದೆ.
ಆರೋಗ್ಯ ಇಲಾಖೆಯ ವತಿಯಿಂದ ಮೇಲ್ವಿಚಾರಣಾ ತಂಡಗಳನ್ನು ರಚಿಸಿ ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ನಿಲಯಗಳ ವ್ಯವಸ್ಥೆಯನ್ನು ನಿಯಮಿತವಾಗಿ ಪರಿಶೀಲಿಸಿ ಇಂತಹ ಘಟನೆಗಳು ಮರುಕಳಿಸದಂತೆ ಜಾಗೃತಿ ವಹಿಸಲು ಕ್ರಮ ಕೈಗೊಳ್ಳಲಾಗಿದೆ.
ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ
@osd_cmkarnataka `ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ.