ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 08
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿ. ವತಿಯಿಂದ 2024-25ನೇ ಸಾಲಿನ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ) ಯೋಜನೆ, ಜೀಜಾವು-ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ರಾಜಶ್ರೀ ಶಾಹುಮಹರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ (ಹೊಸದು), ಮರಾಠ ಮಿಲ್ಟ್ರಿ ಹೋಟಲ್, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗೆ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಮರಾಠ ಸಮುದಾಯಕ್ಕೆ ಸೇರಿದ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://www.sevasindu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು-560032 ಅಥವಾ ನಿಗಮದ ವೆಬ್ ಸೈಟ್ https://www.kmcdc.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ : 080-23539601 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.