ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಒಟ್ಟು 6 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಭೂಮಿ ಸಮಸ್ಯೆ ಎದುರಾಗಿರುವ ಬಗ್ಗೆ ಮಾಧ್ಯಮದಲ್ಲಿ ವರದಿ ಪ್ರಕಟವಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
ಅದರನ್ವಯ ಈಗಾಗಲೇ ಸ್ವಚ್ಛ ಭಾರತ್ ಮಿಷನ್ ಮತ್ತು ನರೇಗಾ ಯೋಜನೆಯಡಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಕಳಸ ಮತ್ತು ಇಣಕಣಿ ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ನಿರ್ವಹಣೆ ಆಗುತ್ತಿದೆ. ಉಳಿದ ನಾಲ್ಕು ಪಂಚಾಯಿತಿಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಪ್ರಾರಂಭಗೊಂಡು ಪ್ರಗತಿಯಲ್ಲಿದೆ. ತ್ಯಾಜ್ಯ ನಿರ್ವಹಣಾ ಘಟಕಗಳ ಮೂಲಕ ಸಮರ್ಪಕವಾಗಿ ಕಸ ವಿಲೇವಾರಿ ಮತ್ತು ನಿರ್ವಹಣೆಯನ್ನು ಮಾಡಲು ಸೂಚನೆ ನೀಡಲಾಗಿದೆ.
ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ
@osd_cmkarnataka `ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ.