Views: 2
ದಾವಣಗೆರೆ ಮೇ.31:
ಕಟ್ಟುನಿಟ್ಟಾದ ಕಸ ಬೇರ್ಪಡಿಕೆಯನ್ನು ಜವಾಬ್ದಾರಿಯುತ ನಾಗರಿಕರಾಗಿ ನಿರ್ವಹಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕರೆಣ್ಣ ತಿಳಿಸಿದರು.
ಗುರುವಾರ(30) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಹಾಗೂ ಮಹಾನಗರ ಪಾಲಿಕೆ, ದಾವಣಗೆರೆ ಇವರ ಸಹಯೋಗದೊಂದಿಗೆ ಪಾಲಿಕೆಯ ಸಭಾಂಗಣದಲ್ಲಿ ಸ್ವಚ್ಛ ಸರ್ವೇಕ್ಷಣೆ ಹಾಗೂ ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮದಡಿ ಘನ ತ್ಯಾಜ್ಯ ನಿರ್ವಹಣೆಗೆ ಒತ್ತು ನೀಡುವ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕರೆಣ್ಣ ಉದ್ಘಾಟಿಸಿ ಮಾತನಾಡಿದರು. ಕಟ್ಟುನಿಟ್ಟಾದ ಕಸ ಬೇರ್ಪಡಿಕೆ ಬಗ್ಗೆ ಜವಾಬ್ದಾರಿ ನಾಗರಿಕರಾಗಿ ವರ್ತಿಸಬೇಕು. ಪೌರಕಾರ್ಮಿಕರ ಆರೋಗ್ಯ ವಿಮೆ ಹಾಗೂ ರಕ್ಷಣಾ ಧಿರಿಸುಗಳನ್ನು ಉಪಯೋಗಿಸಿ ತಮ್ಮ ಆರೋಗ್ಯವನ್ನು ಕಾಪಡಿಕೊಳ್ಳಬೇಕು ಎಂದು ತಿಳಿಸಿದರು.
ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರರನ್ನು ಗುರುತಿಸಿ ಪ್ರೊತ್ಸಾಹಿಸಲು ಹಾಗೂ ಗ್ರಾಮ ಮತ್ತು ಸ್ಥಳೀಯ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು. ವಾರ್ಡ್ ಮಟ್ಟದಲ್ಲಿ ಕಸ ವಿಂಗಡಣೆ, ಪ್ಲಾಸ್ಟಿಕ್ ತ್ಯಾಜ್ಯದ ಶೇಖರಣೆ ಹಾಗೂ ಕಾನೂನಾತ್ಮಕ ವಿಲೇವಾರಿಯ ಬಗ್ಗೆ ವಾರ್ಡ್ ಮಟ್ಟದಲ್ಲಿನ ಉತ್ತಮ ಅಭ್ಯಾಸಗಳನ್ನು ಗುರುತಿಸಿ, ಪೆÇ್ರೀತ್ಸಾಹಿಸುವುದರ ಉಪಕ್ರಮವನ್ನು ಕಾನೂನಾತ್ಮಕವಾಗಿ ಹಾಗೂ ಪಾಲಿಕೆಯ ವತಿಯಿಂದ ಕೈಗೊಳ್ಳಲು ತಿಳಿಸಿದರು.
ಪಾಲಿಕೆಯ ಆಯುಕ್ತರಾದ ರೇಣುಕಾ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮದ ಕಾರ್ಯಯೋಜನೆ ಹಾಗೂ ಕಾಮಗಾರಿಗಳ ಕುರಿತು ಪಾಲಿಕೆಯ ಅಧಿಕಾರಿಗಳಿಗೆ ನಗರವನ್ನು ಧೂಳು ಮುಕ್ತವಾಗಿ ಪರಿವರ್ತಿಸಲು ತಿಳಿಸಿದರು. ಹಾಗೆಯೇ ಕಾರ್ಯಕ್ರಮದ ಅಡಿಯಲ್ಲಿ ಪ್ರತಿದಿನ ಉತ್ಪತ್ತಿಯಾಗುವ ಹಸಿ ಕಸ ಹಾಗೂ ಒಣ ಕಸವನ್ನು ಬೇರೆ ಬೇರೆಯಾಗಿ ವಿಂಗಡಿಸುವುದು ಹಾಗೂ ಸಸ್ಯಗಳನ್ನು ಬೆಳೆಸುವುದು, ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಈ ರೀತಿಯ ಕಾಮಗಾರಿಗಳ ಕುರಿತು ತಿಳಿಸಿದರು.

ಯೋಜನಾ ನಿರ್ದೇಶಕ ಎನ್.ಮಹಾಂತೇಶ್ ಮಾತನಾಡಿ ಇಂದಿನ ಯುವ ಪೀಳಿಗೆಗೆ ಘನ ತ್ಯಾಜ್ಯ ನಿರ್ವಹಣೆಯ ಅರಿವು ಅಗತ್ಯ ಹಾಗೂ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಅರಿವು ಪಡೆದುಕೊಳ್ಳಬೇಕು, ಹಸಿ ಕಸ-ಒಣ ಕಸ ಬೇರ್ಪಡಿಸಿ ನೀಡಬೇಕು ಪ್ರತಿ ದಿನ 170 ಟನ್‍ಗಿಂತ ಹೆಚ್ಚಿನ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು ಈ ಬಗ್ಗೆ ಪಾಲಿಕೆಯವರು ಮತ್ತು ಸರ್ಕಾರ ನೀಡುವ ಸಲಹೆ, ಸೂಚನೆಗಳನ್ನು ಸಾರ್ವಜನಿಕರು ಪಾಲಿಸಿದರೆ ಮಾತ್ರ ತ್ಯಾಜ್ಯ ನಿರ್ವಹಣೆ ಸರಿಯಾಗಿ ನಡೆಯುತ್ತದೆ, ಇಲ್ಲವಾದರೆ ಭವಿಷ್ಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಡಾ. ಎಚ್. ಲಕ್ಷೀಕಾಂತ್ ಮಾತನಾಡಿ, ಮನೆಗಳಲ್ಲಿ ಉಪಯೋಗಿಸುವ 26 ತರಹದ ಹಾನಿಕಾರಕ ಪದಾರ್ಥಗಳನ್ನು ಮನೆಯಲ್ಲಿಯೇ ಬೇರ್ಪಡಿಸಿ ನೀಡಬೇಕು. ಪ್ಲಾಸ್ಟಿಕ್ ಬಳಕೆ ಹಾಗೂ ನಿಷೇಧ ಹಾಗೂ ವೈದ್ಯಕೀಯ ತ್ಯಾಜ್ಯ ಹಾಗೂ ಮನೆಯ ಅಪಾಯಕಾರಿ ತ್ಯಾಜ್ಯದಿಂದ ಮಣ್ಣಿನ ಮೇಲೆ ಆಗುತ್ತಿರುವ ದುಷ್ಪರಿಣಾಮ, ಎಲೆಕ್ಟ್ರಾನಿಕ್ಸ್ ಗ್ಯಾಜೆಟ್‍ಗಳ ಮಿತಬಳಕೆ, ಮರುಬಳಕೆ ಹಾಗೂ ವಿಲೇವಾರಿಯ ಕುರಿತು ತಿಳಿಸಿ ತಂತ್ರಜ್ಞಾನ ಮಾನವನ ಜೀವನಕ್ಕೆ ಅವಶ್ಯವಿರುವಷ್ಟು ಮಾತ್ರ ಬಳಸಿಕೊಂಡರೆ ಸೂಕ್ತ ಎಂದು ಆರೋಗ್ಯಕರ ಜೀವನಕ್ಕಾಗಿ ಆಹಾರ ಪದ್ಧತಿ, ಜೀವನ ಶೈಲಿ ಮತ್ತು ಪರಿಸರದ ಸಂರಕ್ಷಣೆ ಅವಶ್ಯಕತೆ ಇದೆ ಎಂದರು.
ಈ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.