ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

0
41
Share this Article
0
(0)
Views: 4

ಬಳ್ಳಾರಿ,ಆ.29

ಕೃಷಿ ಇಲಾಖೆ ವತಿಯಿಂದ ಕ್ಷೇತ್ರದಲ್ಲಿ ಯಂತ್ರೋಪಕರಣಗಳ ಬಳಕೆ ಅಧಿಕ ಮಾಡುವ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು, ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಂ. ಸೋಮಸುಂದರ ತಿಳಿಸಿದ್ದಾರೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಅನುಷ್ಟಾನ ಮಾಡಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾದಾರ ಸಂಸ್ಥೆಗಳು, ವೈಯಕ್ತಿಕ ಫಲಾನುಭವಿಗಳು ಹಾಗೂ ನೊಂದಾಯಿತ ಸಂಘ ಸಂಸ್ಥೆಗಳು ಎಫ್‌ಪಿಓ ಸಂಸ್ಥೆಗಳು ಯೋಜನೆಗೆ ಅರ್ಹರಾಗಿದ್ದು, ಆಸಕ್ತ ರೈತರು ಸಂಬoಧಿಸಿದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸೆ.24 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಅನುಷ್ಟಾನ ಮಾಡಲು ಸರ್ಕಾರದ ಆದೇಶವಾಗಿದ್ದು, ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡಾರ್ ಮಾದರಿಯಲ್ಲಿ ಸ್ಥಾಪಿಸಬಹುದು.

ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಗರಿಷ್ಟ ರೂ.40 ಲಕ್ಷ ಸಹಾಯಧನ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಗರಿಷ್ಠ ಶೇ.70ರಂತೆ ಹಾಗೂ ಸಂಘ-ಸoಸ್ಥೆಗಳಿಗೆ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ, ಎಫ್‌ಪಿಓಗಳನ್ನೊಳಗೊಂಡoತೆ ಗರಿಷ್ಠ ಶೇ.70 ರಂತೆ ಗರಿಷ್ಟ ರೂ.50 ಸಹಾಯಧನ ನೀಡಲಾಗುತ್ತದೆ.

ಸಂಘ-ಸoಸ್ಥೆಗಳು, ಎಫ್‌ಪಿಓಗಳನ್ನೊಳಗೊಂಡoತೆ ಟ್ರಸ್ಟ್ಗಳು ಮಾತ್ರ ಕಂಬೈoಡ್ ಹಾರ್ವೆಸ್ಟರ್ ಮತ್ತು ಶುಗರ್‌ಕೇನ್ ಹಾರ್ವೆಸ್ಟರ್‌ಗಳನ್ನು ಒಳಗೊಂಡ “ಕೋಂಬೊ ಹಾರ್ವೆಸ್ಟರ್ ಹಬ್” ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

ಕೃಷಿ ಯಂತ್ರೋಪಕರಣವಾರು ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗಲಿದ್ದು, ಸಹಾಯಧನವನ್ನು ಕ್ರೆಡಿಟ್ ಲಿಂಕ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮುಖಾಂತರ ಬಿಡುಗಡೆ ಮಾಡಲಾಗುತ್ತದೆ.

ಆಯ್ಕೆಯಾದ ಫಲಾನುಭವಿಗಳು ಅಥವಾ ಸಂಘ-ಸoಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಸಹಕಾರ ಸಂಘಗಳ ನಿಬಂಧನೆಯoತೆ ಕಂಪನಿ ಕಾಯ್ದೆಯಡಿ ನೊಂದಾಯಿಸಿದ ಸಂಘ-ಸoಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತವೆ. ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳ, ಕೃಷಿ ಯಂತ್ರೋಪಕರಣಗಳ ಬ್ಯಾಂಕ್, ರೈತ ಉತ್ಪಾದಕ ಸಂಸ್ಥೆಗಳು, ಇತರೆ ಸಂಘ-ಸAಸ್ಥೆಗಳು ರಾಜ್ಯಾದ್ಯಂತ ಅರ್ಜಿಗಳನ್ನು ಸಲ್ಲಿಸಬಹುದು.

ಆರು ಅಥವಾ ಒಂಬತ್ತು ವರ್ಷಗಳ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ತಪಾಸಣೆಯಲ್ಲಿ ಸಂಪೂರ್ಣವಾಗಿ ಲೆಕ್ಕ-ಪತ್ರ ಹಾಗೂ ಯಂತ್ರೋಪಕರಣಗಳನ್ನು ಹಾಜರುಪಡಿಸಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬಹುಹುದು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಮೊ.8277934298 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.