ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

0
256
Share this Article
0
(0)
Views: 76

       ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 03

ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-2024ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಙೆಯಿಮದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ, ಪ್ರಕರಣವು 2023ರ ಆಗಸ್ಟ್ 01 ರಿಂದ 2024ರ ಜುಲೈ 31 ರೊಳಗೆ ನಡೆದಿರಬೇಕು. 2006ರ ಆಗಸ್ಟ್ 01 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಇದೇ ಸಂದರ್ಭದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಕನಿಷ್ಠ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

             ಮಕ್ಕಳ ದಿನಾಚರಣೆ-2024 ಸಾಲಿನ ಪ್ರಶಸ್ತಿಗಾಗಿ ನಿಗದಿ ಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಸೆಪ್ಟೆಂಬರ್ 27 ರೊಳಗೆ ಸಲ್ಲಿಸತಕ್ಕದ್ದು, ಅರ್ಜಿಗಳು ಕನ್ನಡ ಭಾಷೆಯಲ್ಲಿಯೇ ಸಲ್ಲಿತಕ್ಕದ್ದು.

             ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಮಕ್ಕಳು ಅರ್ಜಿಯನ್ನು ಪಡೆಯಲು ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ:206, 2 ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ ಸಂ: 080-29787445, ದೇವನಹಳ್ಳಿ-080-27682268, ದೊಡ್ಡಬಳ್ಳಾಪುರ-08027625228, ಹೊಸಕೋಟೆ-080-27931493, ನೆಲಮಂಗಲ-080-2772217 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.