ಬೆಂಗಳೂರು, ಡಿಸೆಂಬರ್ 05;
ಕರ್ನಾಟಕ ಬಯಲಾಟ ಅಕಾಡೆಮಿಯು ಬಯಲಾಟ ಕಲಾಪ್ರಕಾರಗಳಾದ (ಸಣ್ಣಾಟ, ದೊಡ್ಡಾಟ, ಶ್ರೀ ಕೃಷ್ಣ ಪಾರಿಜಾತ, ತೋಗಲುಗೊಂಬೆ) ಕಲಾಪ್ರಕಾರಗಳಿಗೆ ಸಂಬಂಧಿಸಿದಂತೆ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ 2022ನೇ ಜನವರಿ 1 ರಿಂದ 2022 ನೇ ಡಿಸೆಂಬರ್ 31 ಹಾಗೂ 2022ನೇ ಜನವರಿ 1 ರಿಂದ 2023 ನೇ ಡಿಸೆಂಬರ್ 31 ರವರೆಗೆ ಪ್ರಕಟಿಸಿರುವ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರು ಮತ್ತು ಪ್ರಕಾಶರಿಂದ ಅರ್ಜಿ ಆಹ್ವಾನಿಸಿದೆ.
ಆಯ್ಕೆಯಾದ ಪುಸ್ತಕಕ್ಕೆ ರೂ.25,000/-ಗಳ ಬಹುಮಾನವನ್ನು ನೀಡಲಾಗುವುದು. ಬಯಲಾಟದ ವಿವಿಧ ಬಗ್ಗೆ ಸಂಗೀತ, ಅಭಿನಯ, ಸಂಶೋಧನಾ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನಾ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.
ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಬಯಲಾಟ ಅಕಾಡೆಮಿ, ಕಲಾಭವನ “ಸಾಂಸ್ಕøತಿಕ ಸಂಕೀರ್ಣ” ಸೆಕ್ಟರ್ ನಂ.19, 6 ನೇ ರಸ್ತೆ, ನವನಗರ-ಬಾಗಲಕೋಟೆ -587103 ಇವರಿಗೆ 2024ರ ಜುಲೈ 25ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಯು ಪತ್ರಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಅಕಾಡೆಮಿಯ ದೂರವಾಣಿ ಸಂಖ್ಯೆ:08354235070 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಹಾಗೂ ಅರ್ಜಿಗಳನ್ನು ಆಯಾ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ಬಾಗಲಕೋಟೆ ಕರ್ನಾಟಕ ಬಯಲಾಟ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ