ದಾವಣಗೆರೆ ಆ.05
ಹೊನ್ನಾಳಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಮತ್ತು 21 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್ http:88dwcd.karnataka.gov.in ಮತ್ತು http://karnemakaone.kar.nic.in/abcd/ ಸಲ್ಲಿಸಬಹುದು ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.