ಬೆಂಗಳೂರು, ಸೆಪ್ಟೆಂಬರ್ 11
ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ಸರ್ಕಾರದ ನವೀಕರಿಸಬಹುದಾದ ಇಂಧನ ದಕ್ಷತೆ ವಿಭಾಗ ಇವರ ಪ್ರಾಯೋಜಕತ್ವದಲ್ಲಿ ಡಿಪ್ಲೊಮಾ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ “ಇಂಧನ ದಕ್ಷತೆಯ ಪಂಪ್‍ಗಳು ಮತ್ತು ಉಪಕರಣಗಳು ಹಾಗೂ ಇಂಧನ ದಕ್ಷತೆಯ ಕ್ರಮಗಳು ವಿಷಯದ ಕುರಿತು ಉಚಿತವಾಗಿ ಕಾರ್ಯಾಗಾರವನ್ನು ಸೆಪ್ಟೆಂಬರ್ 20 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30 ರವರೆಗೆ ಬೆಂಗಳೂರಿನ ಎಸ್.ಜೆ. ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರಕ್ಕೆ ಭಾಗವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಹೆಸರನ್ನು ಸೆಪ್ಟೆಂಬರ್ 17 ರ ಒಳಗಾಗಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448249557, 9739047466 ಮತ್ತು 9739569699 ಗೆ ಸಂಪರ್ಕಿಸಬಹುದಾಗಿದೆ ಎಂದು ಎಸ್.ಜೆ. ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.