ಬೆಂಗಳೂರು, ಮೇ 28:
ಕರ್ನಾಟಕ ಲೋಕಸೇವಾ ಆಯೋಗವು ರೇಷ್ಮೇ ಇಲಾಖೆಯಲ್ಲಿ ರೇಷ್ಮೆ ವಿಸ್ತರಣಾಧಿಕಾರಿಗಳು – 72 (ಆರ್.ಪಿ.ಸಿ) ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಮೇ 24 ರಂದು ಆಯೋಗದ ಅಂತರ್ಜಾಲ https://www.kpsc.kar.nic.in ನಲ್ಲಿ ಪ್ರಕಟಿಸಿದೆ.
ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ. ಆಯ್ಕೆ ಪಟ್ಟಿ ಪ್ರಕಟಿಸಿದ 07 ದಿನಗಳ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು – 560001 ಇವರಿಗೆ ಸಲ್ಲಿಸುವುದು. 07 ದಿನಗಳ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಕರ್ನಾಟಕ ಲೋಕಸೇವ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ