ಬೆಂಗಳೂರು, ಆಗಸ್ಟ್ 06
ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇವರ ವತಿಯಿಂದ 2024-25 ನೇ ಸಾಲಿಗೆ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ಧಿಗಾಗಿ ಶೈಕ್ಷಣಿಕ ಸಾಲ ಯೋಜನೆ (ಬಸವಬೆಳಗು ಮತ್ತು ವಿದೇಶ ವಿದ್ಯಾವಿಕಾಸ), ಜೀವಜಲ (ಗಂಗಾಕಲ್ಯಾಣ), ಸ್ವಯಂ ಉದ್ಯೋಗ ಯೋಜನೆಗಳು (ಕಾಯಕಕಿರಣ, ಸ್ವಾವಲಂಭಿ ಸಾರಥಿ, ವಿಭೂತಿ ನಿರ್ಮಾಣ ಘಟಕ, ಭೋಜನಾಲಯ ಕೇಂದ್ರ ಮತ್ತು ಸ್ವಯಂ ಉದ್ಯೋಗ ಬ್ಯಾಂಕ್ ಸಹಯೋಗದೊಂದಿಗೆ) ಗಳಿಗೆ ಸೇವಾಸಿಂಧು ತಂತ್ರಾಂಶದ ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೆÇೀರ್ಟಲ್ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. 2023-24 ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರುಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITIs, GTTC KGTTI ATDC VTU ಮೂಲಕ ತರಬೇತಿಯನ್ನು ಪಡೆಯಲು ಅರ್ಜಿದಾರ https://www.kaushalkar.com/ ಜಾಲತಾಣದೊಂದಿಗೆ ಅರ್ಜಿಯನ್ನು ಆಗಸ್ಟ್ 31, 2024ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://www.kaushalkar.com/ ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522/ 9900012351 ನ್ನು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.