ಬಳ್ಳಾರಿ,ಜು.03
ಜಿಲ್ಲೆಯ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕಿನ ವ್ಯಾಪ್ತಿಯಲ್ಲಿ ಬಿತ್ತನೆ ಕಾರ್ಯ ಶುರುವಾಗಿದ್ದು, ರೈತರು ನೋಂದಣಿಯಾಗದ ಬೀಜ, ರಸಗೊಬ್ಬರ, ಕೀಟನಾಶಕ ಅಥವಾ ಗ್ರಾಮಗಳಲ್ಲಿ ನೇರವಾಗಿ ಯಾವುದೇ ಪರವಾನಿಗೆ ಇಲ್ಲದೇ ಮಾರಾಟ ಮಾಡುವ ಪರಿಕರಗಳನ್ನು ಉಪಯೋಗಿಸಬಾರದು ಎಂದು ಸಹಾಯಕ ಕೃಷಿ ನಿದೇರ್ಶಕ ದಯಾನಂದ ಅವರು ತಿಳಿಸಿದ್ದಾರೆ.
ಯಾವುದೇ ಗ್ರಾಮದಲ್ಲಿ ಪರವಾನಿಗೆ ಇಲ್ಲದೇ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಮಾರಾಟ ಮಾಡಿದಲ್ಲಿ ಕೂಡಲೇ ಕೃಷಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು. ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಖರೀದಿಸುವಾಗ ಕಡ್ಡಾಯವಾಗಿ ರಶೀದಿ ಪಡೆದುಕೊಳ್ಳಬೇಕು. ರಸೀದಿಗಳನ್ನು ಬೆಳೆಯ ಹಂತ ಮುಗಿಯುವವರೆಗೂ ಇಟ್ಟುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.