ಬೆಂಗಳೂರು ನಗರ ಜಿಲ್ಲೆ, ಸೆಪ್ಟೆಂಬರ್ 17
ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ ಯೋಜನೆ ಕಾರ್ಯಕ್ರಮದಲ್ಲಿ ಬೆಳೆ ಸ್ಪರ್ಧೆಗೆ ಆಸಕ್ತ ಪುರುಷ ರೈತರು ಹಾಗೂ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೃಷಿ ಪಂಡಿತ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಮುಂಗಾರು ಹಂಗಾಮಿಗೆ ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅಥವಾ ಜಂಟಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಬನಶಂಕರಿ, ಬೆಂಗಳೂರು-70 ಅಥವಾ ದೂರವಾಣಿ ಸಂಖ್ಯೆ : 080-2671159 ಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.