Views: 0
ಶಿವಮೊಗ್ಗ, ಮೇ -31:
ಕೇಂದ್ರೀಯ ಸೈನಿಕ ಮಂಡಳಿ (ಕೆ.ಎಸ್.ಬಿ) ಯ ಜಾಲತಾಣದ ತಾಂತ್ರಿಕ ದೋಷವನ್ನು ಮೇ – 24 ರಿಂದ ಸರಿಪಡಿಸಲಾಗಿದ್ದು, ಪ್ರಸ್ತುತ ಸುಗಮವಾಗಿ ಕಾರ್ಯ ನಿರ್ವಹಿಸುತ್ತಿದೆ.
ಕೇಂದ್ರೀಯ ಸೈನಿಕ ಮಂಡಳಿಯಿಂದ ನೀಡಲಾಗುವ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಬಾಕಿಯಿರುವವರು ಕೂಡಲೇ ಅರ್ಜಿಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಸಂಬಂಧಿತ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಖುದ್ದಾಗಿ ಭೇಟಿ ನೀಡಿ ಅನುಮೋದನೆ ಪಡೆಯುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.