ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 12:
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನ “ಗ್ರಾಮೀಣ ಪುನರ್ವಸತಿ ಯೋಜನೆಯಡಿ”ಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಾದ ರಾಮೋಹಳ್ಳಿ, ಕೆ,ಗೊಲ್ಲಹಳ್ಳಿ. ಆನೇಕಲ್ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಾದ ಬನ್ನೇರುಘಟ್ಟ ಮತ್ತು ಹಂದೇನಹಳ್ಳಿ. ಯಲಹಂಕ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಾದ ರಾಜನುಕುಂಟೆ, ಗಂಟಗಾನಹಳ್ಳಿ, ಸಾತನೂರು, ನೊನ್ನೇನಹಳ್ಳಿ ಮತ್ತು ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಯಾದ ಕೊಡತಿ ಇಲ್ಲಿ ಖಾಲಿ ಇರುವ ಗ್ರಾಮೀಣ ಪುರ್ನವಸತಿ ಕಾರ್ಯಕರ್ತರ (VRW) ಹುದ್ದೆಗಳಿಗೆ ಮಾಸಿಕ ಗೌರವಧನ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷದೊಳಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ/ಅನುರ್ತೀಣರಾಗಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (VRW) ಹುದ್ದೆಗೆ ಅಭ್ಯರ್ಥಿಯು ಸ್ಥಳೀಯವಾಗಿ ವಾಸವಿರಬೇಕು. ಸ್ಥಳೀಯವಾಗಿ ವಾಸಿಸುತ್ತಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆಯನ್ನು ಹೊಂದಿರಬೇಕು (ಅಂಗವಿಕಲರ ಗುರುತಿನ ಚೀಟಿ ಪ್ರತಿಯನ್ನು ಲಗತ್ತಿಸಬೇಕು), ಭಾಗಶಃ ದೃಷ್ಠಿದೋಷವುಳ್ಳವರು, ಭಾಗಶಃ ಶ್ರವಣದೋಷವುಳ್ಳವರು, ದೈಹಿಕ ಅಂಗವಿಕಲರು ಮಾತ್ರ ಅರ್ಜಿ ಸಲ್ಲಿಸಬಹುದು.
ಅಸಕ್ತ ವಿಕಲಚೇತನರು, ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು-29 ಇಲ್ಲಿ ಜನವರಿ 16, 2025ರ ಸಂಜೆ 5.00 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳ ಕಛೇರಿ ಅಥವಾ ದೂರವಾಣಿ ಸಂಖ್ಯೆ 080- 29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.