ಬೆಂಗಳೂರು ನಗರ ಜಿಲ್ಲೆ, ಸೆಪ್ಟೆಂಬರ್ 17
ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ ಸೆಪ್ಟೆಂಬರ್ 21 ರಂದು “ತೋಟಗಾರಿಕೆಯಲ್ಲಿ ಸಸ್ಯಾಭಿವೃದ್ಧಿ ವಿಧಾನಗಳು” (Propagation techniques in Horticulture) ಬಗ್ಗೆ ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಅಭ್ಯರ್ಥಿಗಳು ತರಬೇತಿ ದಿನದಂದು ರೂ. 250 –ಗಳನ್ನು ಜೈವಿಕ ಕೇಂದ್ರ ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ ಪಾವತಿಸಿ ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9449833153, 7892618755, 9066764248 ಅಥವಾ ಇ-ಮೇಲ್ ಗೆ sadh.co2023@gmail.com jaicikaendra.hulimavu@gmail.com ಭೇಟಿ ನೀಡಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.